|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

08.05.2019

         
ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

                       ಶುಕ್ಲಪಕ್ಷ /ಚತುರ್ಥಿ ತಿಥಿ/

ಬುಧವಾರ/ಮೃಗಶಿರಾ ನಕ್ಷತ್ರ /

ದಿನಾಂಕ 08.05.2019

 °~•~°~•~°~•~°~•~°~•~°

ಮೇಷ

          ಅಡುಗೆಯ ಸಂಬಂಧಿ ಕೆಲಸ ಮಾಡುವವರು, ಕೃಷಿಕರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣ ಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯಕ್ಕೆ ಸಂಬಂಧಪಟ್ಟಂತಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾತಿನ ಮೂಲಕ ಜಗಳಗಳು ಸಂಭವಿಸುವ ಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡು ಬರುವುದು.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುವುದು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ, ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು, ರಕ್ತ ಸಂಬಂಧಿ ತೊಂದರೆಗಳು, ಪಿತ್ತಕ್ಕೆ ಸಂಬಂಧಪಟ್ಟಂತಹ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡುಬಂದರೂ ಕೂಡ  ಸಣ್ಣಪುಟ್ಟ ಅಡೆ ತಡೆಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುವುದರಿಂದ ದುಂದು ವೆಚ್ಚ ಮಾಡಬೇಡಿ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕರಾಗಿರಬೇಕು. ಗಂಟು ನೋವು, ತಲೆನೋವು, ಶೀತ ಜ್ವರ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಉತ್ತಮ ಮುನ್ನಡೆ ದೊರೆಯಲಿದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಪರಿಶ್ರಮದಿಂದ ಅಭಿವೃದ್ಧಿ ಕಂಡುಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು.  ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


     ವ್ಯಾಪಾರಸ್ಥರು ಹಾಗೂ ಕೃಷಿಕರಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಅಡೆತಡೆಗಳನ್ನು ಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ಮಾಡುತ್ತಿರುವ ಕೆಲಸ ಕಾರ್ಯಗಳಲ್ಲಿ  ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು ದಾಂಪತ್ಯ ಜೀವನದಲ್ಲಿ  ಶಾಂತಿ ನೆಲೆಗೊಳ್ಳುತ್ತದೆ. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ . ಕುಟುಂಬದಲ್ಲಿ ಕಲಹಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಆರೋಗ್ಯ ಹೊಂದುತ್ತೀರಿ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಆಲಸ್ಯತನ ವನ್ನು ಬಿಟ್ಟು ಮುಂದುವರಿಯಬೇಕು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ಸಹೋದ್ಯೋಗಿಗಳೊಂದಿಗೆ  ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ವ್ಯವಹಾರ ಕ್ಷೇತ್ರಗಳಲ್ಲಿ ಮೋಸ ಹೋಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹಣಕಾಸಿನ ವಿಚಾರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು  ಹೊಂದುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ತೊಡಗಿಸಿಕೊಂಡ ಕೆಲಸಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹಗಳು ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡುಬರುವುದು ಹಾಗೂ ಉತ್ತಮ ಕಾರ್ಯಗಳಿಗೆ ಹಣವನ್ನು  ವಿನಿಯೋಗಿಸಿ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ  ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ದೊರೆಯುತ್ತದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}