ಶ್ರೀಗೋಕರ್ಣ
ಶ್ರೀಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ತುಳಸಿ ವಿವಾಹ ಸಂಪನ್ನ.
ಗೋಕರ್ಣ: ಶ್ರೀಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ನ.20ರಂದು, ಮಂಗಳವಾರ ತುಳಸಿ ವಿವಾಹ ಸಂಪನ್ನಗೊಂಡಿತು. ವೇದಮೂರ್ತಿ ಶ್ರೀ ಶಿತಿಕಂಠ ಹಿರೇಭಟ್ ಪೂಜೆ ನೆರವೇರಿಸಿದರು. ಆಡಳಿತಾಧಿಕಾರಿ ಶ್ರೀ ಜಿ.ಕೆ. ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
Read Moreಶ್ರೀಕ್ಷೇತ್ರ ಗೋಕರ್ಣದಲ್ಲಿ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ ಲಕ್ಷಬಿಲ್ವಾರ್ಚನೆ – ತೆಪ್ಪೋತ್ಸವ
ಗೋಕರ್ಣ: ಶ್ರೀಸಂಸ್ಥಾನದವರ ದಿವ್ಯಾಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ಶ್ರೀಕ್ಷೇತ್ರ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ವಿಲಂಬ ಸಂವತ್ಸರದ ತ್ರಿಪುರಾಖ್ಯ ದೀಪೋತ್ಸವ ನಿಮಿತ್ತ ನವೆಂಬರ್ 22ರಂದು ಗುರುವಾರ ಮಧ್ಯಾಹ್ನ ಲಕ್ಷ ಬಿಲ್ವಾರ್ಚನೆ ಸಹಿತ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮುಂಜಾನೆ ಲಕ್ಷಬಿಲ್ವಾರ್ಚನೆ, ವಿಶೇಷ ಮಹಾಪೂಜೆ, ಬಿಲ್ವಾರ್ಚನಾ ಹವನ , ನೈಮಿತ್ತಿಕ ಬಲಿ, ಅನಂತರ ಭೀಮಕೊಂಡಕ್ಕೆ ಉತ್ಸವ ಹೋಗಿ ಅಲ್ಲಿ ಧಾತ್ರಿ ಹವನ, ವನಭೋಜನ ಜರುಗಲಿವೆ. ರಾತ್ರಿ ದೇವಾಲಯದಲ್ಲಿ ಲಕ್ಷ ದೀಪೋತ್ಸವ, ಕೋಟಿತೀರ್ಥದಲ್ಲಿ ಜಲಾಯನ ದೀಪೋತ್ಸವ , ತೆಪ್ಪೋತ್ಸವ ಹಾಗೂ
Read Moreಶ್ರೀಕ್ಷೇತ್ರ ಗೋಕರ್ಣದಲ್ಲಿ ಶಿವಗಂಗಾ ಮಹೋತ್ಸವ ಸಂಪನ್ನ – ಮಹಾಬಲೇಶ್ವರನ ದರ್ಶನ ಪಡೆದ ಸಚಿವ ಎಸ್. ಆರ್. ಶ್ರೀನಿವಾಸ್
ಗೋಕರ್ಣ: ಶ್ರೀಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ವಿಲಂಬ ಸಂವತ್ಸರದ ಶಿವಗಂಗಾ ವಿವಾಹ ಮಹೋತ್ಸವವು, ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ಆಶ್ವೀಜ ಬಹುಳ ಚತುರ್ದಶಿಯ ದಿನ ವೈಭವದಿಂದ ಜರುಗಿತು. ಶ್ರೀಕ್ಷೇತ್ರ ಗೋಕರ್ಣದ ವಿಶಾಲವಾದ ಕಡಲ ತೀರದಲ್ಲಿ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಭಕ್ತ ಜನರ ಸಮ್ಮುಖದಲ್ಲಿ ನಿಶ್ಚಯಿತ ವಧುವಾಗಿ ಬಂದ ಗಂಗಾಮಾತೆ ಜಗದೀಶ್ವರನನ್ನು ವರಿಸಿದಳು. ಕಡಲಿನ ಅಬ್ಬರ, ವಾದ್ಯಘೋಷ , ವೇದಘೋಷ, ವಿಶಿಷ್ಟ ತೋರಣ, ಗುಮಟೆಪಾಂಗ ಜಾನಪದ ಹಾಡುಗಳು ಉತ್ಸವಕ್ಕೆ ಮೆರುಗನ್ನು ನೀಡಿದವು. ಭಕ್ತರು ಆರತಿ ನೀಡಿ ದೇವದಂಪತಿಗಳನ್ನು ಬರಮಾಡಿಕೊಂಡರು.
Read More