|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

10.02.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಮಾಘ ಮಾಸ /
ಶುಕ್ಲ ಪಕ್ಷ /ಪಂಚಮೀ ತಿಥಿ/

ರವಿವಾರ/ ರೇವತೀ ನಕ್ಷತ್ರ /

ದಿನಾಂಕ: 10.02.2019

 °~•~°~•~°~•~°~•~°~•~°

ಮೇಷ

        ಕಾರ್ಯಕ್ಷೇತ್ರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಅಧಿಕಾರಿಗಳಿಂದ ಅಸಮಾಧಾನದ ಮಾತು ಕೇಳಿಬರುತ್ತದೆ. ಹಣಕಾಸಿನ ತೊಂದರೆ ಏರ್ಪಡುತ್ತದೆ. ಮಾನಸಿಕ ಅಶಾಂತಿ ತಲೆದೋರುತ್ತದೆ. ತಾಯಿಯ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಜಗಳಗಳನ್ನು ಎದುರಿಸಬೇಕಾಗುತ್ತದೆ. ಚರ್ಮ ಸಂಬಂಧಿ ತೊಂದರೆಗಳು, ಶೀತ, ಜ್ವರ, ತಲೆನೋವು ಮುಂತಾದವನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದಲ್ಲಿ ಮಾತ್ರ ಶುಭ.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು:
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯ-ಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಅಡೆತಡೆಗಳು ಕಂಡುಬರುವುದು. ವ್ಯವಹಾರವು ತುಂಬ ನಿಧಾನಗತಿಯಲ್ಲಿ ಸಾಗುವುದು. ಸಂಪಾದಿಸಿದ ಹಣವು  ವಿನಾಕಾರಣ ಖರ್ಚಾಗುವುದು. ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯಜೀವನದಲ್ಲಿ ಸುಖ. ಆರೋಗ್ಯದಲ್ಲಿ ಏರುಪೇರು. ವಿದ್ಯಾರ್ಥಿಗಳು ಉದಾಸೀನತೆ ಬಿಟ್ಟು ಮುಂದುವರಿಯಬೇಕು.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು:
ಸರ್ವದೇವಮಯೇ ದೇವಿ

ಸರ್ವದೇವೈ-ರಲಂಕೃತೇ |
ಮಾತರ್ಮಮಾ-ಭಿಲಷಿತಂ

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸ ಕಾರ್ಯದಲ್ಲಿ ತಕ್ಕಮಟ್ಟಿನ ಮುನ್ನಡೆ ಕಂಡುಬರುತ್ತದೆ. ಉತ್ತಮ ಸಂಪಾದನೆ ಆಗುವ ಲಕ್ಷಣ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಏರ್ಪಡುವುದು‌. ಉದರ ಸಂಬಂಧಿ, ನರ ಸಂಬಂಧಿ  ಹಾಗೂ ಚರ್ಮ ಸಂಬಂಧಿ ತೊಂದರೆಗಳು ಬರುವ ಲಕ್ಷಣ ಇರುವುದರಿಂದ ಜಾಗರೂಕರಾಗಿರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆಯ ಲಕ್ಷಣವಿದೆ.



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು:
ದೇವತಾಕಾರ್ಯ-ಸಿದ್ಧ್ಯರ್ಥಂ

ಸಭಾಸ್ತಂಭ-ಸಮುದ್ಭವಮ್ |
ಶ್ರೀನೃಸಿಂಹ ಮಹಾವೀರಂ

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಮಾಡುತ್ತಿರುವಂತಹ ಕೆಲಸ ಕಾರ್ಯದಲ್ಲಿ ಉತ್ತಮ ಏಳಿಗೆ ದೊರೆಯಲಿದೆ. ಹಣಕಾಸಿನ ವಿಚಾರದಲ್ಲಿ ಮುನ್ನಡೆಯನ್ನು ಸಾಧಿಸುತ್ತೀರಿ. ಮನಶ್ಶಾಂತಿ ನೆಮ್ಮದಿ ದೊರೆಯುತ್ತದೆ. ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಲೆಸುತ್ತದೆ. ಮೈ, ಕೈ, ಗಂಟು ನೋವು, ಶೀತ,ಜ್ವರ ಬರುವ ಲಕ್ಷಣಗಳಿದ್ದು ಜಾಗರೂಕರಾಗಿರಬೇಕು.  ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಉತ್ತಮ ಏಳಿಗೆ ದೊರೆಯಲಿದೆ.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮ: / ಶ್ರೀಶಾಂತ್ಯೈ ನಮ: / ಶ್ರೀಶಾಂಭವ್ಯೈ ನಮ: / ಶ್ರೀಭೂತಿದಾಯಿನ್ಯೈ ನಮ: / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮ: / ಶ್ರೀಶಿವದೂತ್ಯೈ ನಮ: / ಶ್ರೀಮಹಾಲಕ್ಷ್ಮ್ಯೈ ನಮ: / ಶ್ರೀಮಹಾಮಾಯಾಯೈ ನಮ: / ಶ್ರೀಯೋಗನಿದ್ರಾಯೈ ನಮ: / ಶ್ರೀಚಂಡಿಕಾಯೈ ನಮ:

 °~•~°~•~°~•~°~•~°~•~°



ಸಿಂಹ

     ತೊಡಗಿಕೊಂಡ ಕೆಲಸ ಕಾರ್ಯದಲ್ಲಿ ಅಡೆತಡೆಗಳು ಕಂಡುಬರುವುದು. ಮಾನಸಿಕವಾದ ದುಗುಡಗಳು ಹೆಚ್ಚಾಗುವುದು. ಆರ್ಥಿಕ ಹಿನ್ನಡೆ ಕಂಡುಬರುತ್ತದೆ. ಆದುದರಿಂದ ಜಾಗರೂಕತೆಯಿಂದ ವ್ಯವಹರಿಸಿ, ಅಧಿಕ ಖರ್ಚು ಮಾಡಬೇಡಿ. ದಾಂಪತ್ಯಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದೊಂದಿಗೆ, ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು:
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಂ|
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


    ನೂತನ ಕೆಲಸ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಅವಕಾಶ ಒದಗಿಬರುವುದು, ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಉತ್ತಮ ಏಳಿಗೆ ಕಂಡುಬರುತ್ತದೆ. ಉತ್ತಮ ಸಂಪಾದನೆಯಾದರೂ ಕೂಡ ಖರ್ಚುವೆಚ್ಚ ಜಾಸ್ತಿ ಆಗುವುದು. ದಾಂಪತ್ಯಜೀವನದಲ್ಲಿ ಸುಖ, ನೆಮ್ಮದಿ ದೊರೆಯುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗಭಾಗ್ಯಗಳು ಒದಗಿಬರುವುದು. ಉತ್ತಮ ಆರೋಗ್ಯ ಹೊಂದುವಿರಿ. ವಿದ್ಯಾರ್ಥಿಗಳು ಉತ್ತಮವಾಗಿ ಅಭ್ಯಸಿಸಿದರೆ ಮಾತ್ರ ಮುನ್ನಡೆ ದೊರೆಯುತ್ತದೆ.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ.

ಜಪಿಸಲು:
ವಸುದೇವಸುತಂ  ದೇವಂ

ಕಂಸಚಾಣೂರ-ಮರ್ದನಮ್  |
ದೇವಕೀ-ಪರಮಾನಂದಂ  

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ಅಡತಡೆ ಕಂಡುಬರುವುದು. ಆರ್ಥಿಕ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಲೆಸುವುದು. ಶೀತ, ಜ್ವರ, ಕಫ, ಮಾನಸಿಕ ಖಿನ್ನತೆ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳ ಉತ್ತಮ ಪರಿಶ್ರಮದಿಂದ ಉತ್ತಮ ಫಲ ಲಭ್ಯ.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಂ

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ಮಾಡುತ್ತಿರುವ ಕೆಲಸದಲ್ಲಿ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಸಂಪಾದಿಸಿದ ಹಣವು ವಿನಾಕಾರಣ ಖರ್ಚಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ವ್ಯವಹರಿಸಿ. ದಾಂಪತ್ಯಜೀವನದಲ್ಲಿ ಸುಖ. ಉತ್ತಮ ಆರೋಗ್ಯಭಾಗ್ಯ  ಪಡೆಯುವಿರಿ. ವಿದ್ಯಾರ್ಥಿಗಳು ತಮ್ಮ ಆಲಸ್ಯ ಬಿಟ್ಟು ಮುಂದುವರಿಯಬೇಕು. ಯಾವುದೇ ಕಾರಣಕ್ಕೂ ಕೂಡ ಸತ್ಯವನ್ನೇ ನುಡಿಯಿರಿ.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾ:

ಸುಬ್ರಮಣ್ಯ-ಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಸಣ್ಣಪುಟ್ಟ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಆರ್ಥಿಕ  ಖರ್ಚು ಒದಗಿಬರುವುದು. ದಾಂಪತ್ಯಜೀವನದಲ್ಲಿ ಸುಖ, ಶಾಂತಿ ನೆಲೆಸುವುದು. ಆರೋಗ್ಯದಲ್ಲಿ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ, ಗುರುಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಿರಿ.  ತಂದೆ ತಾಯಿಯ ಹಾಗೂ ಗುರುವಿನ ಆಶೀರ್ವಾದವನ್ನು ಪಡೆಯಿರಿ.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು:
ಅಖಂಡಮಂಡಲಾಕಾರಂ

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ತೊಡಗಿಸಿಕೊಂಡ ಕಾರ್ಯಕ್ಷೇತ್ರದಲ್ಲಿ ಹಿನ್ನಡೆ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳು ಕಂಡುಬಂದರೂ ಕೂಡ ಚಾಕಚಕ್ಯತೆಯಿಂದ ಮುನ್ನಡೆಯಿರಿ. ಉತ್ತಮ ಆರೋಗ್ಯ ಪಡೆಯುವಿರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಆಲಸ್ಯ ಬಿಟ್ಟು ಮುಂದುವರಿಯಬೇಕು.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು:
ಶುದ್ಧಸ್ಫಟಿಕ-ಸಂಕಾಶಂ
ಶುದ್ಧವಿದ್ಯಾ-ಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಂ
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ಮಾಡುತ್ತಿರುವ ಕೆಲಸ ಕಾರ್ಯದಲ್ಲಿ ಉತ್ತಮ ಏಳಿಗೆ ಲಭ್ಯವಾಗಲಿದೆ. ಉತ್ತಮ ಧನಸಹಾಯ ಒದಗಿ ಬರುವುದು. ದಾಂಪತ್ಯಜೀವನದಲ್ಲಿ ಸಣ್ಣಪುಟ್ಟ ಕಲಹಗಳನ್ನು ಎದುರಿಸಬೇಕಾಗುತ್ತದೆ. ಶೀತ, ಕಫ ಮುಂತಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಮುನ್ನಡೆ ಸಾಧಿಸುವ ಸೂಚನೆಗಳಿದ್ದು ಉತ್ತಮ ಪ್ರೋತ್ಸಾಹವನ್ನು ನೀಡಿ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು:
ಅಂಜನಾಗರ್ಭ-ಸಂಭೂತ
ಕಪೀಂದ್ರ-ಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಂ
ಹನುಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯಜೀವನದಲ್ಲಿ ಸುಖ-ಶಾಂತಿ ನೆಲೆಸುತ್ತದೆ. ಯುವಕರಿಗೆ ವಿವಾಹ ಯೋಗಭಾಗ್ಯಗಳು ಒದಗಿಬರುತ್ತದೆ. ಉತ್ತಮ ಮನಶ್ಶಾಂತಿ ದೊರೆಯುತ್ತದೆ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥ ಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು:    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}