|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

21.03.2019

         

ವಿಲಂಬನಾಮ ಸಂವತ್ಸರ / ಉತ್ತರಾಯಣ /
ಶಿಶಿರ ಋತು / ಪಾಲ್ಗುನ ಮಾಸ /
ಶುಕ್ಲ ಪಕ್ಷ /ಪೌರ್ಣಮಿ/ಪ್ರತಿಪತ್ ತಿಥಿ /

ಗುರುವಾರ/ಉತ್ತರಾ ನಕ್ಷತ್ರ/

ದಿನಾಂಕ: 21.03.2019

 °~•~°~•~°~•~°~•~°~•~°

ಮೇಷ

        ಏಕಾಗ್ರತೆಯಿಂದ ಹಾಗೂ ಉತ್ತಮ ಶ್ರದ್ಧೆಯಿಂದ ಕೆಲಸವನ್ನು  ಮುನ್ನಡೆಸಿಕೊಂಡು ಬಂದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಕಂಡುಬರುತ್ತದೆ. ಮಾನಸಿಕವಾದ ಖಿನ್ನತೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ತಾಯಿಯ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ  ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಏಕಾಗ್ರತೆಯಿಂದ ಮುಂದುವರಿಯಬೇಕು.



ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

         ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ  ಕಂಡುಬರುತ್ತದೆ.ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡಕಬರುತ್ತದೆ.




ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ


   ಉದಾಸೀನತೆ ಬಿಟ್ಟುಮುಂದುವರೆದರೆ ಮಾತ್ರ ವ್ಯಾವಹಾರಿಕ ಅಭಿವೃದ್ಧಿ ಕಂಡು ಬರುತ್ತದೆ.ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುತ್ತದೆ.ಆಹಾರದ ಮೂಲಕವಾಗಿ ತೊಂದರೆ ಬರುವರಕ್ಷಣಗಳಿರುವುದರಿಂದ ಜಾಗರೂಕರಾಗಿರಬೇಕು.ವಿದ್ಯಾರ್ಥಿಗಳು ಆಲಸ್ಯತನಬಿಟ್ಟು ಮುಂದುವರಿಯಬೇಕು



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

   ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ಉತ್ತಮ ಅಭಿವೃದ್ಧಿ ಕಂಡುಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

     ಉದ್ಯೋಗ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಕನಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು, ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಒದಗಿ ಬರುತ್ತದೆ.  ಉತ್ತಮ ಶ್ರದ್ಧೆ ಹಾಗೂ ಏಕಾಗ್ರತೆಯಿಂದ ತೊಡಗಿಸಿಕೊಂಡಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ಚರ್ಮ ಸಂಬಂಧಿ ತೊಂದರೆ, ಜ್ವರ, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆ ಏನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ  ಕಲಹ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿಯಬೇಕು.



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ


       ವ್ಯಾವಹಾರಿಕ ಕ್ಷೇತ್ರದಲ್ಲಿ ನಿಧಾನಗತಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಪಿತ್ತ ಸಂಬಂಧವಾದ ತೊಂದರೆ ಎದುರಿಸಬೇಕಾಗುತ್ತದೆ.  ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುಂದುವರಿಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ


  
ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ.  ಜ್ವರ, ದೇಹದಲ್ಲಿ ಉಷ್ಣತೆ ಮೊದಲಾದ ತೊಂದರೆ ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಏಕಾಗ್ರತೆಯಿಂದ ಮುಂದುವರಿಯಬೇಕು.

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


    ನೂತನ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ ಒದಗಿ ಬರುತ್ತದೆ. ಸ್ಥಾನಮಾನಗಳು ಲಭಿಸುತ್ತವೆ.  ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಎದುರಿಸಬೇಕಾಗುತ್ತದೆ. ಆರೋಗ್ಯದಲ್ಲಿ ನಿಧಾನಗತಿಯ ಚೇತರಿಕೆ ಕಂಡು ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ  ಮುಂದುವರಿಯಬೇಕು.


ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುವುದು.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಶ್ವಾಸ ಸಂಬಂಧಿ ತೊಂದರೆಯನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :
ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  


      ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ಕುಟುಂಬದಲ್ಲಿ ಕಲಹ ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಯುವಕ-ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರೆದರೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


  ಉದಾಸೀನತೆ ಬಿಟ್ಟು ಮುಂದುವರೆದಲ್ಲಿ ಉತ್ತಮ ಅಭಿವೃದ್ಧಿ  ಕಾರ್ಯಕ್ಷೇತ್ರದಲ್ಲಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆ ಆಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ,  ಯುವಕಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುಂದುವರಿದರೆ ಉತ್ತಮ ಅಭಿವೃದ್ಧಿ ಕಂಡು ಬರುವುದು


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}