|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

07.05.2019

         
ವಿಕಾರಿನಾಮ ಸಂವತ್ಸರ / ಉತ್ತರಾಯಣ /
ವಸಂತ ಋತು / ವೈಶಾಖ ಮಾಸ/

                    ಶುಕ್ಲಪಕ್ಷ /ತೃತೀಯಾ ತಿಥಿ/

ಮಂಗಳ/ರೋಹಿಣೀ ನಕ್ಷತ್ರ /

ದಿನಾಂಕ 07.05.2019

 °~•~°~•~°~•~°~•~°~•~°

ಮೇಷ

          ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ  ಸಣ್ಣ ಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಸಹೋದರರ ನಡುವೆ  ಕಲಹ ಏರ್ ಪಡುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ  ಕಂಡು ಬರುತ್ತದೆ.



ಪರಿಹಾರ:
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಮಂಗಲಮಾಂಗಲ್ಯೇ
ಶಿವೇ ಸರ್ವಾರ್ಥಸಾಧಿಕೇ |
ಶರಣ್ಯೇ ತ್ರ್ಯಂಬಕೇ ಗೌರಿ
ನಾರಾಯಣಿ ನಮೋಸ್ತು ತೇ ||

°~•~°~•~°~•~°~•~°~•~°

    

ವೃಷಭ

         ನೂತನ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತದೆ. ಉತ್ತಮ ಸ್ಥಾನಮಾನ ಗೌರವಗಳು ಲಭಿಸುತ್ತದೆ. ಹಣಕಾಸಿನ ವಿಚಾರದಲ್ಲಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಹಾಗೂ ದುಂದುವೆಚ್ಚವನ್ನು ಮಾಡಬೇಡಿ. ಮಾತಿನ ಮೂಲಕ ಜಗಳಗಳು ಸಂಭವಿಸುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಉತ್ತಮ ಆರೋಗ್ಯವನ್ನು ಹೊಂದುತ್ತೀರಿ. ಕುಟುಂಬದಲ್ಲಿ ಕಲಹಗಳು ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮಾತ್ರ ಮುನ್ನಡೆ ಕಂಡುಬರುವುದು.




ಪರಿಹಾರ
ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ  / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ  / ಶ್ರೀನಾರಾಯಣ್ಯೈ ನಮ: / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ  / ಶ್ರೀಚಂಡಿಕಾಯೈ ನಮಃ ||

°~•~°~•~°~•~°~•~°~•~°



ಮಿಥುನ


   ತೊಡಗಿಸಿಕೊಂಡ ಕೆಲಸ ಕಾರ್ಯಗಳಲ್ಲಿ ವಿಘ್ನಗಳು ಎದುರಾಗುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಹಾಗೂ ರಕ್ತ ಸಂಬಂಧಿ ತೊಂದರೆಗಳು ಕಂಡು ಬರುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಮುನ್ನಡೆ ಕಂಡುಬರುತ್ತದೆ.



ಪರಿಹಾರ  
ಶ್ರೀಕೃಷ್ಣನ ಆರಾಧನೆ,ಗುರುದೇವತಾ ಆರಾಧನೆಯಿಂದ ಶುಭ.

ಜಪಿಸಲು :
ವಸುದೇವಸುತಂ ದೇವಮ್

ಕಂಸಚಾಣೂರಮರ್ದನಮ್ |

ದೇವಕೀಪರಮಾನನ್ದಮ್

ಕೃಷ್ಣಂ ವನ್ದೇ ಜಗದ್ಗುರುಮ್ ||

  °~•~°~•~°~•~°~•~°~•~°



ಕರ್ಕಾಟಕ

    ನೂತನ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ಒದಗಿ ಬರುತ್ತವೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುವುದು. ದಾಂಪತ್ಯ ಜೀವನದಲ್ಲಿ  ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಆರೋಗ್ಯ ಸಂಬಂಧವಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಸರ್ವಸ್ವರೂಪೇ ಸರ್ವೇಶಿ
ಸರ್ವಶಕ್ತಿಸಮನ್ವಿತೇ |
ಭಯೇಭ್ಯಸ್ತ್ರಾಹಿ ನೋ ದೇವಿ  
ದುರ್ಗೇದೇವಿ ನಮೋಸ್ತು ತೇ ||

 °~•~°~•~°~•~°~•~°~•~°



ಸಿಂಹ

      ಕೆಲಸ ಕಾರ್ಯಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಏಳಿಗೆ ಕಂಡು ಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಭೂಲಾಭ, ವಾಹನ ಲಾಭ ಮೊದಲಾದ ಅಭಿವೃದ್ಧಿಗಳು ಕಂಡುಬರುತ್ತದೆ. ಆರೋಗ್ಯ ಸಂಬಂಧಿ ಆದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮಾತ್ರ ಅಭಿವೃದ್ಧಿ ಕಂಡು ಬರುವುದು.


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

    °~•~°~•~°~•~°~•~°~•~°      


ಕನ್ಯಾ


     ಕೃಷಿಕರು ಹಾಗೂ ಹೋಟೆಲ್ ವ್ಯವಹಾರ ಮಾಡುವವರಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು. ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಅಡೆತಡೆಗಳು ಕಷ್ಟ ನಷ್ಟಗಳನ್ನು ಎದುರಿಸಬೇಕಾಗುತ್ತದೆ.  ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೈ ಕೈ ಗಂಟು ನೋವು, ತಲೆನೋವು, ಜ್ವರ, ಉಷ್ಣತೆ ಮೊದಲಾದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಆಹಾರದ ಮೂಲಕವಾಗಿ ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ತಮ್ಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶ್ರೀರಾಮದೇವರ ಆರಾಧನೆಯಿಂದ  ಶುಭ.

ಜಪಿಸಲು :
ರಾಮಾಯ ರಾಮಭದ್ರಾಯ
ರಾಮಚಂದ್ರಾಯ ವೇಧಸೇ |  
ರಘುನಾಥಾಯ ನಾಥಾಯ
ಸೀತಾಯಾಃ ಪತಯೇ ನಮಃ ||

  °~•~°~•~°~•~°~•~°~•~°       


ತುಲಾ


        ತೆಗೆಸಿಕೊಂಡ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಆರೋಗ್ಯ ಸಂಬಂಧವಾದ ಸಣ್ಣಪುಟ್ಟ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಮಾತಿನ ಮೂಲಕ ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಮಾತಿನಲ್ಲಿ ನಿಗಾ ಇರಲಿ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು:
ಶ್ರೀದುರ್ಗಾಯೈ ನಮಃ  / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮ: / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ  / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀ ಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||


 °~•~°~•~°~•~°~•~°~•~°


ವೃಶ್ಚಿಕ


  
 ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬಂದರೂ ಕೂಡ ನೆಮ್ಮದಿಯನ್ನು ಕಳೆದುಕೊಳ್ಳಬೇಕಾಗುತ್ತದೆ.ಕುಟುಂಬದಲ್ಲಿ  ಕಲಹ ಏರ್ಪಡುವ ಲಕ್ಷಣಗಳು ಇರುವುದರಿಂದ ಜಾಗ್ರತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ. ಆರೋಗ್ಯದಲ್ಲಿ ವ್ಯತ್ಯಾಸಗಳು ಕಂಡು ಬರುತ್ತದೆ.ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.ವಿದ್ಯಾರ್ಥಿಗಳಿಗೆ ಉತ್ತಮ ಪರಿಶ್ರಮದಿಂದ ಮಾತ್ರ ಅಭಿವೃದ್ಧಿ ಕಂಡು ಬರುವುದು.

ಪರಿಹಾರ
ದೇವೀ, ಸುಬ್ರಹ್ಮಣ್ಯಸ್ವಾಮಿಯ ಆರಾಧನೆಯಿಂದ ಶುಭ.


ಜಪಿಸಲು :
ಷಡಾನನಂ ಕುಂಕುಮರಕ್ತವರ್ಣಮ್

ಮಹಾಮತಿಂ ದಿವ್ಯಮಯೂರವಾಹಮ್ |

ರುದ್ರಸ್ಯ ಸೂನುಂ ಸುರಸೈನ್ಯನಾಥಮ್

ಗುಹಂ ಸದಾ ಶರಣಮಹಂ ಪ್ರಪದ್ಯೇ ||

°~•~°~•~°~•~°~•~°~•~°


ಧನು


   ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ಕಷ್ಟನಷ್ಟಗಳು ಎದುರಾಗುತ್ತವೆ, ವ್ಯಾಪಾರಸ್ಥರಿಗೆ ನಷ್ಟ ವನ್ನು ಎದುರಿಸಬೇಕಾದ ಅಂತಹ ಪರಿಸ್ಥಿತಿ ಒದಗಿ ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆಯನ್ನುಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಗಳಿರುವುದರಿಂದ ಜಾಗರೂಕತೆಯಿಂದ ಇರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ವಿಷ್ಣುಸಹಸ್ರನಾಮ ಪಾರಾಯಣ ಮಾಡಿ.

ಜಪಿಸಲು:
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

     °~•~°~•~°~•~°~•~°~•~°


ಮಕರ


    ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುವುದು. ಆರೋಗ್ಯ ಹದಗೆಡುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು.ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗರೂಕರಾಗಿರಬೇಕು.ವಿದ್ಯಾರ್ಥಿಗಳು  ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ
ಶಿವ ದೇವಸ್ಥಾನ ದರ್ಶನ, ಕುಲದೇವತಾರಾಧನೆಯಿಂದ ಶುಭ.  

ಜಪಿಸಲು :
ಶ್ರೀಮಹಾದೇವಾಯ ನಮಃ / ಶ್ರೀಮಹೇಶ್ವರಾಯ ನಮಃ / ಶ್ರೀಶಂಕರಾಯ ನಮಃ / ಶ್ರೀವೃಷಭಧ್ವಜಾಯ ನಮಃ / ಶ್ರೀಕೃತ್ತಿವಾಸಸೇ ನಮಃ / ಶ್ರೀಕಾಮಾಂಗನಾಶನಾಯ ನಮಃ / ಶ್ರೀದೇವದೇವೇಶಾಯ ನಮಃ /  ಶ್ರೀಶ್ರೀಕಂಠಾಯ ನಮಃ / ಶ್ರೀಹರಾಯ ನಮಃ / ಶ್ರೀಪಾರ್ವತೀಪತಯೇ ನಮಃ / ಶ್ರೀರುದ್ರಾಯ ನಮಃ / ಶ್ರೀಶಿವಾಯ ನಮಃ ||

   °~•~°~•~°~•~°~•~°~•~°          


ಕುಂಭ  


      ಮಾಡುವಂತಹ ಕೆಲಸ ಕಾರ್ಯಗಳಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡು ಬರುತ್ತದೆ. ಹಣಕಾಸಿನ ವಿಚಾರದಲ್ಲಿ  ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಉತ್ತಮ ಆರೋಗ್ಯವನ್ನು  ಹೊಂದುವಿರಿ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು.



ಪರಿಹಾರ  
ಶಿವದೇವಸ್ಥಾನ ದರ್ಶನ, ರುದ್ರಾಭಿಷೇಕ ಸೇವೆ, ಕುಲದೇವತಾ ಆರಾಧನೆಯಿಂದ ಶುಭ.

ಜಪಿಸಲು :
ರುದ್ರಂ ಪಶುಪತಿಂ ಸ್ಥಾಣುಮ್

ನೀಲಕಂಠಂ ಉಮಾಪತಿಮ್ |

ನಮಾಮಿ ಶಿರಸಾ ದೇವಮ್

ಕಿಂ ನೋ ಮೃತ್ಯುಃ ಕರಿಷ್ಯತಿ  ||

°~•~°~•~°~•~°~•~°~•~°


ಮೀನ   


   ಭೂ ಸಂಬಂಧಿ ವ್ಯವಹಾರ ಮಾಡುವವರಿಗೆ ಉತ್ತಮ ಏಳಿಗೆ ದೊರೆಯುತ್ತದೆ. ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ಹಣಕಾಸಿನ ವಿಚಾರದಲ್ಲಿ ಉತ್ತಮ ಏಳಿಗೆ ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು ಹಾಗೂ ಯುವಕ ಯುವತಿಯರಿಗೆ ವಿವಾಹ ಯೋಗ ಭಾಗ್ಯ ಒದಗಿ ಬರುತ್ತದೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತದೆ. ವಾಹನ ಪ್ರಯಾಣದ ಸಂದರ್ಭಗಳಲ್ಲಿ ಜಾಗೃತರಾಗಿರಬೇಕು.  ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುತ್ತದೆ.


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶಾಂತಾಕಾರಂ ಭುಜಗಶಯನಮ್  

ಪದ್ಮನಾಭಂ ಸುರೇಶಮ್

ವಿಶ್ವಾಧಾರಂ ಗಗನಸದೃಶಮ್

ಮೇಘವರ್ಣಂ ಶುಭಾಂಗಮ್ |

ಲಕ್ಷ್ಮೀಕಾಂತಂ ಕಮಲನಯನಮ್

ಯೋಗಿಹೃದ್ಧ್ಯಾನಗಮ್ಯಮ್

ವಂದೇ ವಿಷ್ಣುಂ ಭವಭಯಹರಮ್

ಸರ್ವಲೋಕೈಕನಾಥಮ್  ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}