|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

4.06.2019

         

ವಿಕಾರಿನಾಮ ಸಂವತ್ಸರ / ಉತ್ತರಾಯಣ /
ಗ್ರೀಷ್ಮ ಋತು / ಜ್ಯೇಷ್ಠ ಮಾಸ/

ಶುಕ್ಲಪಕ್ಷ/ಪ್ರತಿಪತ್ ತಿಥಿ/

ಮಂಗಳವಾರ/ಮೃಗಶಿರ ನಕ್ಷತ್ರ /



ದಿನಾಂಕ: 04.06.2019

 °~•~°~•~°~•~°~•~°~•~°

ಮೇಷ
ಉತ್ತಮ ಶ್ರದ್ಧೆಯಿಂದ ಕೆಲಸವನ್ನು ಮುನ್ನಡೆಸಿಕೊಂಡು ಬನ್ನಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಕಂಡು ಬರುವುದು

ಪರಿಹಾರ:
ಶ್ರೀದುರ್ಗಾಪರಮೇಶ್ವರೀ ಅಮ್ಮನವರ ಆರಾಧನೆ ಹಾಗೂ ಸುಬ್ರಹ್ಮಣ್ಯ ದೇವರ ಆರಾಧನೆಯನ್ನು ಮಾಡಬೇಕು.

ಜಪಿಸಲು :
ನಮಸ್ತೇ ಶರಣ್ಯೇ ಶಿವೇ ಸಾನುಕಮ್ಪೇ

ನಮಸ್ತೇ ಜಗದ್ವ್ಯಾಪಿಕೇ ವಿಶ್ವರೂಪೇ ।
ನಮಸ್ತೇ ಜಗದ್ವನ್ದ್ಯಪಾದಾರವಿನ್ದೇ

ನಮಸ್ತೇ ಜಗತ್ತಾರಿಣಿ ತ್ರಾಹಿ ದುರ್ಗೇ ॥

°~•~°~•~°~•~°~•~°~•~°

    

ವೃಷಭ

ನೂತನ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ಸ್ಥಾನಮಾನಗಳು ದೊರೆಯುತ್ತದೆ. ಗೃಹ ಉಪಯೋಗಿ ವಸ್ತುಗಳ  ಖರೀದಿಗೆ ಉತ್ತಮ ಅವಕಾಶ ದೊರೆಯುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡುಬರುವುದು

ಪರಿಹಾರ
ಗೋಮಾತೆಯ ದರ್ಶನ ಹಾಗೂ ಸೇವೆಯನ್ನು ಮಾಡಿ.

ಜಪಿಸಲು :
ಸರ್ವದೇವಮಯೇ ದೇವಿ

ಸರ್ವದೇವೈರಲಂಕೃತೇ |
ಮಾತರ್ಮಮಾಭಿಲಷಿತಮ್

ಸಫಲಂ ಕುರು ನಂದಿನಿ ||

°~•~°~•~°~•~°~•~°~•~°



ಮಿಥುನ

     ತೊಡಗಿಸಿಕೊಂಡ ಕೆಲಸಕಾರ್ಯಗಳಲ್ಲಿ ನಿಧಾನಗತಿ ಅಭಿವೃದ್ಧಿ ಕಂಡುಬರಲಿದೆ. ದಾಂಪತ್ಯಜೀವನದಲ್ಲಿ ಕಲಹ ಸಂಭವಿಸುವ ಲಕ್ಷಣ ಇರುವುದರಿಂದ ಜಾಗರೂಕತೆಯಿಂದ ಇರಬೇಕು. ಮಾನಸಿಕ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ  
ನರಸಿಂಹನ ಆರಾಧನೆಯನ್ನು ಮಾಡಿ.

ಜಪಿಸಲು :
ದೇವತಾಕಾರ್ಯಸಿದ್ಧ್ಯರ್ಥಮ್

ಸಭಾಸ್ತಂಭಸಮುದ್ಭವಮ್ |
ಶ್ರೀನೃಸಿಂಹಮಹಾವೀರಮ್

ನಮಾಮಿ ಋಣಮುಕ್ತಯೇ ||

  °~•~°~•~°~•~°~•~°~•~°



ಕರ್ಕಾಟಕ

ನೂತನ  ವ್ಯವಹಾರ ತೊಡಗಿಸಿಕೊಳ್ಳುವ ವರಿಗೆ ಉತ್ತಮ ಅವಕಾಶ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರಲಿದೆ

ಪರಿಹಾರ
ಕುಲದೇವತಾ ಆರಾಧನೆ ಅಗತ್ಯ. ದೇವಿಯ ಆರಾಧನೆಯಿಂದ ಶುಭ.

ಜಪಿಸಲು :
ಶ್ರೀದುರ್ಗಾಯೈ ನಮಃ / ಶ್ರೀಶಾಂತ್ಯೈ ನಮಃ / ಶ್ರೀಶಾಂಭವ್ಯೈ ನಮಃ / ಶ್ರೀಭೂತಿದಾಯಿನ್ಯೈ ನಮಃ / ಶ್ರೀಶಂಕರಪ್ರಿಯಾಯೈ ನಮಃ / ಶ್ರೀನಾರಾಯಣ್ಯೈ ನಮಃ / ಶ್ರೀಭದ್ರಕಾಲ್ಯೈ ನಮಃ / ಶ್ರೀಶಿವದೂತ್ಯೈ ನಮಃ / ಶ್ರೀಮಹಾಲಕ್ಷ್ಮ್ಯೈ ನಮಃ / ಶ್ರೀಮಹಾಮಾಯಾಯೈ ನಮಃ / ಶ್ರೀಯೋಗನಿದ್ರಾಯೈ ನಮಃ / ಶ್ರೀಚಂಡಿಕಾಯೈ ನಮಃ ||

 °~•~°~•~°~•~°~•~°~•~°



ಸಿಂಹ

   ನಿಮ್ಮ ಪರಿಶ್ರಮದಿಂದಾಗಿ ವ್ಯವಹಾರ ಕ್ಷೇತ್ರದಲ್ಲಿ ಉತ್ತಮ ಏಳಿಗೆ  ದೊರೆಯುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭಿವೃದ್ಧಿ ದೊರೆಯಲಿದೆ


ಪರಿಹಾರ
ಶಿವನ ಆರಾಧನೆ ಅಗತ್ಯ.

ಜಪಿಸಲು :
ಕರಚರಣಕೃತಂ ವಾಕ್ಕಾಯಜಂ ಕರ್ಮಜಂ ವಾ
ಶ್ರವಣನಯನಜಂ ವಾ ಮಾನಸಂ ವಾಪರಾಧಮ್ |
ವಿಹಿತಮವಿಹಿತಂ ವಾ ಸರ್ವಮೇತತ್ ಕ್ಷಮಸ್ವ
ಜಯ ಜಯ ಕರುಣಾಬ್ದೇ ಶ್ರೀಮಹಾದೇವ ಶಂಭೋ||

    °~•~°~•~°~•~°~•~°~•~°      


ಕನ್ಯಾ


     ನೂತನ ವ್ಯವಹಾರವನ್ನು ತೊಡಗಿಕೊಳ್ಳುವವರಿಗೆ ಉತ್ತಮ ಅವಕಾಶ ದೊರೆಯಲಿದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಅಭಿವೃದ್ಧಿ ಕಂಡು ಬರುವುದು



ಪರಿಹಾರ
ಶ್ರೀಕೃಷ್ಣ ದೇವರ ಆರಾಧನೆಯಿಂದ ಶುಭ

ಜಪಿಸಲು :
ವಸುದೇವಸುತಂ  ದೇವಮ್

ಕಂಸಚಾಣೂರಮರ್ದನಮ್  |
ದೇವಕೀಪರಮಾನಂದಮ್

ಕೃಷ್ಣಂ ವಂದೇ  ಜಗದ್ಗುರುಮ್ ||

  °~•~°~•~°~•~°~•~°~•~°       


ತುಲಾ

ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕಂಡುಬರುವುದು. ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು .


ಪರಿಹಾರ  
ದುರ್ಗಾದೇವಿಯ ಆರಾಧನೆಯಂದ ಶುಭ.

ಜಪಿಸಲು :
ಸರ್ವರೂಪಮಯೀ ದೇವೀ

ಸರ್ವಂ ದೇವೀಮಯಂ ಜಗತ್ ।
ಅತೋಽಹಂ ವಿಶ್ವರೂಪಾಂ ತ್ವಾಮ್

ನಮಾಮಿ ಪರಮೇಶ್ವರೀಮ್ ||


 °~•~°~•~°~•~°~•~°~•~°


ವೃಶ್ಚಿಕ

ಯುವಕ-ಯುವತಿಯರಿಗೆ ವಿವಾಹಯೋಗ ಭಾಗ್ಯ ಒದಗಿ ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ಮೂತ್ರ ಸಂಬಂಧಿ ತೊಂದರೆಗಳು  ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ವಿದ್ಯಾರ್ಥಿಗಳಿಗೆ ಆಲಸ್ಯ ತನವನ್ನು ಬಿಟ್ಟು ಮುನ್ನಡೆದರೆ ಮಾತ್ರ ಅಭಿವೃದ್ಧಿ ಕಂಡುಬರುವುದು

ಪರಿಹಾರ
ಸುಬ್ರಹ್ಮಣ್ಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

 


ಜಪಿಸಲು:
ಶರಣ್ಯಂ ಸರ್ವಲೋಕಾನಾಮ್

ಅಗ್ರಗಣ್ಯಂ ದಿವೌಕಸಾಮ್ |
ವರೇಣ್ಯಂ ದೇವಸೇನಾಯಾಃ

ಸುಬ್ರಮಣ್ಯಮುಪಾಸ್ಮಹೇ ||

°~•~°~•~°~•~°~•~°~•~°


ಧನು


ಆಲಸ್ಯತನ ವನ್ನು ಬಿಟ್ಟು  ಉತ್ತಮ ಪರಿಶ್ರಮದಿಂದ ಕೆಲಸಗಾರನ ತೊಡಗಿಸಿಕೊಳ್ಳಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಅಭಿವೃದ್ಧಿ ಕಂಡುಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ವಿದ್ಯಾರ್ಥಿಗಳಿಗೆ ನಿಧಾನಗತಿಯ ಏಳಿಗೆ ಕಂಡುಬರುತ್ತದೆ

ಪರಿಹಾರ
ತಂದೆ ತಾಯಿಯರ ಹಾಗೂ ಗುರುವಿನ ಆಶೀರ್ವಾದವನ್ನು  ಪಡೆಯಿರಿ.

ಜಪಿಸಲು :
ಅಖಂಡಮಂಡಲಾಕಾರಮ್

ವ್ಯಾಪ್ತಂ ಯೇನ ಚರಾಚರಮ್ |
ತತ್ಪದಂ ದರ್ಶಿತಂ ಯೇನ

ತಸ್ಮೈ ಶ್ರೀಗುರವೇ ನಮಃ ||

     °~•~°~•~°~•~°~•~°~•~°


ಮಕರ


   ಆರೋಗ್ಯ ಸಂಬಂಧವಾದ ತೊಂದರೆಗಳು ಎದುರಾಗುವ ಲಕ್ಷಣಗಳು ಇರುವುದರಿಂದ ಜಾಗರೂಕತೆಯಿಂದ ಇರಬೇಕು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು   
ಪರಿಹಾರ
ಶಿವಾಲಯ ದರ್ಶನ, ರುದ್ರಾಭಿಷೇಕ ಸೇವೆ ಮಾಡುವುದರಿಂದ ಶುಭ ಆಗಲಿದೆ.  

ಜಪಿಸಲು :

ಶುದ್ಧಸ್ಫಟಿಕಸಂಕಾಶಮ್
ಶುದ್ಧವಿದ್ಯಾಪ್ರದಾಯಕಮ್ |
ಶುದ್ಧಂ ಪೂರ್ಣಂ ಚಿದಾನಂದಮ್
ಸದಾಶಿವಮಹಂ ಭಜೇ ||

   °~•~°~•~°~•~°~•~°~•~°          


ಕುಂಭ  

ಉದ್ಯೋಗ ವ್ಯವಹಾರ ಕ್ಷೇತ್ರಗಳಲ್ಲಿ  ನಿಧಾನಗತಿಯ ಅಭಿವೃದ್ಧಿ ಕಂಡುಬರುತ್ತದೆ. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುವುದು. ಆರೋಗ್ಯ ಸಂಬಂಧಿ ತೊಂದರೆಗಳು ಎದುರಾಗುತ್ತದೆ.  ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆಯಬೇಕು



ಪರಿಹಾರ  
ಶಿವದೇವಸ್ಥಾನ ದರ್ಶನ, ಆಂಜನೇಯ ಸ್ವಾಮಿಯ ಆರಾಧನೆಯಿಂದ ಶುಭವಾಗಲಿದೆ.

ಜಪಿಸಲು :
ಅಂಜನಾಗರ್ಭಸಂಭೂತ
ಕಪೀಂದ್ರಸಚಿವೋತ್ತಮ |
ರಾಮಪ್ರಿಯ ನಮಸ್ತುಭ್ಯಮ್
ಹನೂಮಾನ್ ರಕ್ಷ ಮಾಂ ಸದಾ ||

°~•~°~•~°~•~°~•~°~•~°


ಮೀನ   


     ದೇವತಾನುಗ್ರಹ ದಿಂದ ಕೆಲಸ ಕಾರ್ಯದಲ್ಲಿ ಉತ್ತಮ ಅಭಿವೃದ್ಧಿ ಕಂಡು ಬರುವುದು. ದಾಂಪತ್ಯ ಜೀವನದಲ್ಲಿ ಸುಖ ಶಾಂತಿ ನೆಲೆಗೊಳ್ಳುತ್ತದೆ. ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಅಭಿವೃದ್ಧಿ ಕಂಡು ಬರಲಿದೆ.  ಕುಲದೇವತಾ ದರ್ಶನವನ್ನು ಮಾಡಿ


ಪರಿಹಾರ
ಶ್ರೀಮಹಾವಿಷ್ಣುದೇವರ ಆರಾಧನೆಯಿಂದ ಶುಭ. ಅಶ್ವತ್ಥಮರ ಪ್ರದಕ್ಷಿಣೆ ಬರುವುದರಿಂದ ಶುಭ ಕುಲದೇವತಾ ಆರಾಧನೆಯು ಅತ್ಯಗತ್ಯವಾಗಿದೆ.


ಜಪಿಸಲು :    
ಶ್ರೀಕೇಶವಾಯ ನಮಃ / ಶ್ರೀನಾರಾಯಣಾಯ ನಮಃ / ಶ್ರೀಮಾಧವಾಯ ನಮಃ / ಶ್ರೀಗೋವಿಂದಾಯ ನಮಃ / ಶ್ರೀವಿಷ್ಣವೇ ನಮಃ / ಶ್ರೀಮಧುಸೂದನಾಯ ನಮಃ /  ಶ್ರೀತ್ರಿವಿಕ್ರಮಾಯ ನಮಃ / ಶ್ರೀವಾಮನಾಯ ನಮಃ / ಶ್ರೀಶ್ರೀಧರಾಯ ನಮಃ / ಶ್ರೀಹೃಷಿಕೇಶಾಯ ನಮಃ / ಶ್ರೀಪದ್ಮನಾಭಾಯ ನಮಃ / ಶ್ರೀದಾಮೋದರಾಯ ನಮಃ ||

°~•~°~•~°~•~°~•~°~•~°



{ವಿ. ಸೂ. : ಮೇಲೆ ಕೊಟ್ಟ ಪರಿಹಾರ ಶ್ಲೋಕ ಮತ್ತು ನಾಮಗಳನ್ನು ಸ್ನಾನದ ಅನಂತರ ಶುಚಿಯಾಗಿ ದೇವರ ಮುಂದೆ ದೀಪ ಹಚ್ಚಿ ನಿರ್ಮಲ ಮನಸ್ಸಿನಿಂದ 48 ಸಲ ಪಠಿಸಬೇಕು.}