ಮಠ
ತಾಳ್ಮೆಯ ಸಂಪಾದನೆ ತಪಸ್ಸಿನಿಂದ ಸಾಧ್ಯ: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆಯ ಸಂಪಾದನೆ ಆಗುವುದು ತಪಸ್ಸಿನಿಂದ; ಅತಿಯಾದ ಸುಖ, ದುಃಖವನ್ನು ತಡೆದುಕೊಳ್ಳುವ ತಾಳ್ಮೆ ದೊರಕುವುದು ತಪಸ್ಸಿನಿಂದ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬ್ರಹ್ಮಜ್ಞಾನವನ್ನು ಅನುಭವಿಸುವ ಯೋಗ್ಯತೆ ದೊರಕುವುದು ತಪಸ್ಸಿನಿಂದ ಮಾತ್ರ; ಅದನ್ನು ಅನುಭವಿಸಲು ಯೋಗಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಯೋಗ್ಯತೆ ಇದ್ದರೆ ಮಾತ್ರವೇ ಯೋಗ ಬರಬೇಕು. ಎಂದು ಮಾರ್ಮಿಕವಾಗಿ ನುಡಿದರು. ಯೋಗ್ಯತೆ ಇಲ್ಲದವನಿಗೆ ಯೋಗ
Read Moreತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ”
Read Moreರಾಮಚಂದ್ರಾಪುರ ಮಠದಿಂದ ಗೋಮಯ ಕಾಗದ ಲೋಕಾರ್ಪಣೆ
ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವಶ್ವರಭಾರತೀ ಮಹಾಸ್ವಾಮೀಜಿ ಸೋಮವಾರ ನೆರವೇರಿಸಿದರು. ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷóಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ
Read Moreತಾಳ್ಮೆಗೆ ತಪಸ್ಸಿನ ಫಲವಿದೆ: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು
Read Moreತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು.
Read Moreತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ
ಗೋಕರ್ಣ: ಮನುಸ್ಮøತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ
Read Moreನಂಬಿಕೆ ಜೀವನಕ್ಕೆ ಅಮೃತ ಇದ್ದಂತೆ: ರಾಘವೇಶ್ವರ ಶ್ರೀ
ಗೋಕರ್ಣ: ನಂಬಿಕೆ ಎಂಬ ಭಾವ ಜೀವನಕ್ಕೆ ಅಮೃತ ಇದ್ದಂತೆ. ದೇವರು ನಮ್ಮನ್ನು ಕಾಪಾಡುವ ಬದಲು ಅಚಲವಾದ ನಂಬಿಕೆ ಅಥವಾ ಭರವಸೆಯೇ ನಮ್ಮನ್ನು ಕೋಟೆಯಾಗಿ ನಮ್ಮನ್ನು ಕಾಯುತ್ತದೆ. ಆದ್ದರಿಂದ ಎಲ್ಲರೂ ದೇವರು, ಧರ್ಮ, ಗುರುವಿನಲ್ಲಿ, ಒಳಿತಿನಲ್ಲಿ ನಂಬಿಕೆ ಇಟ್ಟುಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳು ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಎಂಟನೇ ದಿನವಾದ ಬುಧವಾರ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಬಲವಾದ ನಂಬಿಕೆ ಇದ್ದರೆ ಅದು
Read Moreಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಲಿ: ರಾಘವೇಶ್ವರ ಶ್ರೀ
ಗೋಕರ್ಣ: ಸಮಸ್ತ ಸಮಾಜಕ್ಕೆ ಸುಜ್ಞಾನದ ಬೆಳಕನ್ನು ಹರಿಸಿದ ಗುರುಪರಂಪರೆಯ ಪೂಜೆಯೇ ಗುರುಪೂರ್ಣಿಮೆಯ ವಿಶೇಷ. ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಬೇಕು ಎಂಬ ಮಹತ್ಸಂಕಲ್ಪದೊಂದಿಗೆ ಈ ಬಾರಿಯ ಚಾತುರ್ಮಾಸ್ಯವನ್ನು ಗುರುಕುಲ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಗುರುಕುಲ ಚಾತುರ್ಮಾಸ್ಯ ಆರಂಭದ ದಿನ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದ ಪೂಜ್ಯರು, “ಗುರುಪೂರ್ಣಿಮೆ ಎನ್ನುವುದು ಜ್ಞಾನಚೈತನ್ಯದ ಪೂಜೆ. ಅಶೋಕೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಮೂಲ ಉದ್ದೇಶವೂ ಸುಜ್ಞಾನ ಪ್ರಸಾರ. ವಿಶ್ವವಿದ್ಯಾಪೀಠ ಕಟ್ಟಲು ಸಮಸ್ತ
Read Moreಚಾತುರ್ಮಾಸ್ಯ: ರಾಘವೇಶ್ವರ ಶ್ರೀ ಪುರಪ್ರವೇಶ
ಗೋಕರ್ಣ: ಶ್ರೀಮಗ್ಗಜದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಇಪ್ಪತ್ತೊಂಬತ್ತನೇ ಚಾತುರ್ಮಾಸ್ಯದ ಅಂಗವಾಗಿ ಶ್ರೀಗಳ ಪುರಪ್ರವೇಶ ಅಶೋಕೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ಚಾತುರ್ಮಾಸ್ಯ ವ್ರತ ಕೈಗೊಳ್ಳಲು ಆಗಮಿಸಿದ ಪರಮಪೂಜ್ಯರನ್ನು ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಡಿ.ಡಿ.ಶರ್ಮಾ, ಸತ್ಯನಾರಾಯಣ ಶರ್ಮಾ, ವಿವಿಧ ಸಮಾಜಗಳ ಗಣ್ಯರು ಸಕಲ ಗೌರವಗಳೊಂದಿಗೆ ಬರಮಾಡಿಕೊಂಡರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಇಪ್ಪತ್ತೊಂಬತ್ತನೇ ಚಾತುರ್ಮಾಸ್ಯ ವ್ರತ ಆಷಾಢ ಹುಣ್ಣಿಮೆಯಂದು ಬುಧವಾರ (ಜುಲೈ 13) ಅಶೋಕೆಯಲ್ಲಿ ಆರಂಭವಾಗಲಿದೆ. ಮಧ್ಯಾಹ್ನ 2.30ಕ್ಕೆ ನಡೆಯುವ
Read Moreಪುರುಷೋತ್ತಮ’ ಪ್ರಶಸ್ತಿ ಪ್ರಧಾನ
ಸಿದ್ದಾಪುರ: ಜಗತ್ತಿನಲ್ಲಿ ಬಹಳಷ್ಟು ತತ್ವಜ್ಞಾನಿಗಳು ಆಗಿಹೋಗಿದ್ದಾರೆ. ಆದರೆ ಶಂಕರರ ಜನ್ಮದಿನವನ್ನು ತತ್ವಜ್ಞಾನಿಗಳ ದಿನ ಎಂದು ಕರೆಯುವುದು ವಿಶೇಷವಾಗಿದೆ ಎಂದು ಶ್ರೀ ರಾಜಾರಾಮ ಕ್ಷೇತ್ರದ ಸ್ವಾಮೀಜಿಗಳಾದ ಬ್ರಹ್ಮಾನಂದ ಭಾರತಿ ಸ್ವಾಮಿಗಳು ಹೇಳಿದರು. ಅವರು ಶುಕ್ರವಾರ ತಾಲೂಕಿನ ಭಾನ್ಕುಳಿಯ ಗೋಸ್ವರ್ಗದಲ್ಲಿ ನಡೆದ ಶಂಕರ ಪಂಚಮಿಯ ಧರ್ಮಸಭೆ ಮತ್ತು ಪುರುಷೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ, ಮತ ಭೇದವಿಲ್ಲದೆ ಸಾರ್ವಕಾಲಿಕವಾದ, ಸಾರ್ವದೇಶಿಕವಾದ ಉಪದೇಶ ನೀಡಿದಂತಹ ಶಂಕರರನ್ನು ಜಗದ್ಗುರು ಎಂದು ಕರೆಯಲಾಗಿದೆ. ಕರ್ಮ ಮತ್ತು ಚಿತ್ತ ಶುದ್ಧಿಯ ಮೂಲಕ ಮೋಕ್ಷಪ್ರಾಪ್ತಿ
Read Moreಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ
ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮಥ್ರ್ಯ, ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, ಸಿಟ್ಟು ನಮ್ಮ ವಿವೇಕವನ್ನು ಹಾಳು ಮಾಡುತ್ತದೆ. ಸಿಟ್ಟು ಶಿವನ ಸೃಷ್ಟಿ. ಅದು ನಮ್ಮ ಕೈಯಲ್ಲಿದ್ದರೆ ಗುಣ. ಆದರೆ ಸಿಟ್ಟಿನ ಕೈಯಲ್ಲಿ ನಾವಿದ್ದರೆ
Read Moreನಮ್ಮ ಹೃದಯವೇ ರಾಮಮಂದಿರ; ರಾಘವೇಶ್ವರ ಶ್ರೀ
ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ಅನುಗ್ರಹಿಸಿದ ಅವರು, ಲಂಕಾ ಸಾಮ್ರಾಜ್ಯ ತೊರೆದ ಬಳಿಕ ಆತ್ಮದಲ್ಲಿರುವ ರಾಮನಷ್ಟೇ ವಿಭೀಷಣನ ಆಸ್ತಿ. ವಿಭೀಷಣನ ಭವಿಷ್ಯದ ಬದುಕು ಅಮೂರ್ತವಾಗಿತ್ತು. ಅಮೂರ್ತದಿಂದ ರಾಮಮೂರ್ತಿಯನ್ನು ಕಂಡುಕೊಂಡಿದ್ದರಿಂದಲೇ ವಿಭೀಷಣನ ಮುಂದಿನ ಹಾಸಿ ಸ್ಪಷ್ಟವಾಯಿತು. ಈ ಅರಿವೇ ಮುಂದೆ
Read Moreಆಸೆಯ ಪಾಶದಿಂದ ಮುಕ್ತಿ ಪಡೆದರಷ್ಟೇ ಮನಃಶಾಂತಿ: ರಾಘವೇಶ್ವರ ಶ್ರೀ
ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧಿಸಲು ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನ ಅನುಗ್ರಹಿಸಿದ ಅವರು, “ಆಸೆ ಮನದಾಳದಲ್ಲಿ ಹುಟ್ಟಿಕೊಂಡರೆ ತಾನು ಸುಮ್ಮನಿರುವುದಿಲ್ಲ. ನಮ್ಮನ್ನು ಸಮ್ಮನಿರಲು ಬಿಡುವುದಿಲ್ಲ. ಆಸೆ ಅನಾಹುತಕ್ಕೆ ಕಾರಣ. ಇದು ರಜೋಗುಣ. ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ
Read Moreರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ: ರಾಘವೇಶ್ವರ ಸ್ವಾಮೀಜಿ
ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಎರಡನೇ ದಿನದ ಪ್ರವಚನ ಅನುಗ್ರಹಿಸಿದ ಅವರು, ರಾಮ ಸೀತೆಯ ಪ್ರೀತಿ ಪರಿಪೂರ್ಣ. ಪರಿಪೂರ್ಣ ಪ್ರೀತಿಯಷ್ಟೇ ವಿಶ್ವದ ಪ್ರೀತಿಯಾಗಿ ಭಗವತ್ ಪ್ರೀತಿಯಾಗಿ ಮಾರ್ಪಡುತ್ತದೆ ಎಂದು ವಿಶ್ಲೇಷಿಸಿದರು. ಪ್ರೀತಿ ಹಾಗೂ ತ್ಯಾಗಕ್ಕೆ ರಾಮ
Read Moreರಾಮನ ಸೀತಾಪ್ರೀತಿ ಪ್ರಶ್ನಾತೀತ: ರಾಘವೇಶ್ವರ ಶ್ರೀ
ಅಗ್ನಿಪರೀಕ್ಷೆ ಹಿನ್ನೆಲೆಯಲ್ಲಿ ಸೀತೆಯ ಬಗೆಗಿನ ರಾಮನ ಪ್ರೀತಿಯನ್ನು ಪ್ರಶ್ನಿಸುವವರಿದ್ದಾರೆ. ಆದರೆ ಈ ಎಲ್ಲ ಪ್ರಶ್ನೆಗಳಿಗೆ ರಾಮಸೇತು ಉತ್ತರ ಎಂದು ಗೋಕರ್ಣ ಮಂಡಲಾಧೀಶ್ವರ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಬುಧವಾರ ಆರಂಭವಾದ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೊದಲ ದಿನದ ಪ್ರವಚನ ಅನುಗ್ರಹಿಸಿದ ಅವರು, “ಜಗತ್ತಿನ ತಂದೆ ತಾಯಿಗಳನ್ನು ಒಂದಾಗಿಸಿದ್ದು ರಾಮಸೇತು. ತ್ರೇತಾಯುಗ ಯುಗದಲ್ಲಿ ಸೀತೆಗಾಗಿ ವಿಶ್ವಯುದ್ಧವನ್ನೇ ರಾಮ ನಡೆಸಿದ್ದಾನೆ. ಸಮುದ್ರಕ್ಕೆ ಸೇತುವೆ ನಿರ್ಮಿಸಿದ್ದು ಸೀತೆಗಾಗಿ. ಇಂಥ ಪ್ರೀತಿಯನ್ನು
Read Moreಉಕ್ರೇನ್ ಸಂತ್ರಸ್ತ ವಿದ್ಯಾರ್ಥಿಗಳಿಗೆ ರಾಮಚಂದ್ರಾಪುರ ಮಠ ಸಹಾಯಹಸ್ತ
ಬೆಂಗಳೂರು: ಯುದ್ಧಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲು ಭಾರತ ಸರ್ಕಾರ ಆರಂಭಿಸಿದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಗೆ ಶ್ರೀರಾಮಚಂದ್ರಾಪುರ ಮಠ ಟ್ವಿಟ್ಟರ್‍ನಲ್ಲಿ ಸಹಾಯವಾಣಿ ಆರಂಭಿಸುವ ಮೂಲಕ ನೆರವು ನೀಡಿರುವುದು ಸಂತ್ರಸ್ತ ವಿದ್ಯಾರ್ಥಿಗಳ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಉಕ್ರೇನ್ ಮೇಲೆ ಫೆಬ್ರುವರಿ 24ರಂದು ರಷ್ಯಾ ಅತಿಕ್ರಮಣ ನಡೆಸಿದ ಸುದ್ದಿ ಸ್ಫೋಟವಾಗುತ್ತಿದ್ದಂತೆ, ಉಕ್ರೇನ್‍ನಲ್ಲಿರುವ ಅಪಾರ ಸಂಖ್ಯೆಯ ಶ್ರೀಮಠದ ಶಿಷ್ಯರು, ಕನ್ನಡಿಗ ಹಾಗೂ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವ ಉದ್ದೇಶದಿಂದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ
Read Moreಸೇವೆಯಿಂದ ದಿವ್ಯತೆ, ಪವಿತ್ರತೆ ಪ್ರಾಪ್ತಿ: ರಾಘವೇಶ್ವರ ಸ್ವಾಮೀಜಿ
ಮಂಗಳೂರು: ಮಠಕ್ಕೆ ಭೇಟಿ ನೀಡುವುದೇ ಒಂದು ಪುಣ್ಯಸ್ನಾನ ಇದ್ದಂತೆ. ಸೇವೆ ಸಲ್ಲಿಸುವುದು ಇನ್ನಷ್ಟು ಶ್ರೇಷ್ಠ. ನಮ್ಮ ಜೀವ- ಆತ್ಮವನ್ನು ಶುಚಿಗೊಳಿಸುವಂಥದ್ದು. ದಿವ್ಯತೆ, ಶುದ್ಧತೆ, ಪವಿತ್ರತೆ ನಮಗೆ ಗುರುಸೇವೆಯಿಂದ ಪ್ರಾಪ್ತವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು. ಮಾಣಿಯ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ 49ನೇ ವಾರ್ಷಿಕೋತ್ಸವ ಮತ್ತು ಸೂತ್ರಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಮಠದ ಕೆಲಸ ಕಾರ್ಯ, ಸೇವೆ ನಮ್ಮ ಜೀವನದ ಸಾರ್ಥಕತೆಗಾಗಿ ಇರುವಂಥದ್ದು. ಅತೀವ ಶಾಂತಿ- ಸಮಾಧಾನವನ್ನು
Read Moreಸೀಮೋಲ್ಲಂಘನೆ ಮುಕ್ತಿಗೆ ಸೋಪಾನ: ರಾಘವೇಶ್ವರ ಶ್ರೀ
ಬೆಂಗಳೂರು: ಸೀಮೋಲ್ಲಂಘನೆ ಎಂದರೆ ಆತ್ಮದ ವಿಸ್ತರಣೆ ಮತ್ತು ಮುಕ್ತಿಗೆ ಸೋಪಾನ. ಆತ್ಮವಿಸ್ತಾರವಾಗಿ ಮುಕ್ತಿ ಪಡೆಯುವುದೇ ನಿಜ ಅರ್ಥದ ಸೀಮೋಲ್ಲಂಘನೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ನುಡಿದರು. ಪ್ಲವನಾಮ ಸಂವತ್ಸರದ ವಿಶ್ವವಿದ್ಯಾ ಚಾತುರ್ಮಾಸ್ಯದ ಸೀಮೋಲ್ಲಂಘನೆ ಧರ್ಮಸಭೆಯಲ್ಲಿ ಪಡೀಲು ಮಹಾಬಲೇಶ್ವರ ಭಟ್ ಅವರಿಗೆ ಚಾತುರ್ಮಾಸ್ಯ ಪ್ರಶಸ್ತಿ ಅನುಗ್ರಹಿಸಿ ಶ್ರೀಗಳು ಆಶೀರ್ವಚನ ನೀಡಿದರು. ಮತ್ತೊಬ್ಬರ ದುಃಖ ಪರಿಹರಿಸುವುದು ನಿಜ ಅರ್ಥದ ಸೀಮೋಲ್ಲಂಘನೆ. ಅವರವರ ಕರ್ತವ್ಯವನ್ನು ಮಾಡುವ ಜತೆಗೆ ಕ್ಷೇತ್ರ ವಿಸ್ತಾರ, ಬದುಕಿನ ಆಯಾಮ ವಿಸ್ತರಿಸುವ ಪ್ರಯತ್ನ ಮಾಡಬೇಕು. ಇಡೀ ವಿಶ್ವಕ್ಕೇ ವ್ಯಾಪಿಸುವುದೇ
Read Moreಸಮಾಜಕ್ಕಾಗಿ ಮಾಡುವ ಸಮರ್ಪಣೆ ಔದಾರ್ಯವಲ್ಲ; ಅದು ಕರ್ತವ್ಯ – ರಾಘವೇಶ್ವರ ಶ್ರೀ
ಸಮಾಜಕ್ಕಾಗಿ ಮಾಡುವ ಸಮರ್ಪಣೆ ಅಥವಾ ಕೆಲಸವು ಔದಾರ್ಯವಲ್ಲ. ಅದು ಕರ್ತವ್ಯವೇ ಆಗಿದೆ. ಮನುಷ್ಯ ಸಂಘಜೀವಿಯಾಗಿದ್ದು, ಸಮಾಜದಲ್ಲಿ ಪರಸ್ಪರ ಸಹಕಾರವಿಲ್ಲದೇ ಜೀವನನಡೆಸಲು ಸಾಧ್ಯವಿಲ್ಲ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ “ವಿಶ್ವವಿದ್ಯಾ~ ಚಾತುರ್ಮಾಸ್ಯ” ದ ಸಂದರ್ಭದಲ್ಲಿ *ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ* ಸ್ವೀಕರಿಸಿ ಮಾತನಾಡಿದ ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು, ಸಂಘಟನೆಗೆ ಹಾಗೂ ಸಮಾಜಕ್ಕೆ ಇರುವೆಯು ಪರಮಾದರ್ಶವಾಗಿದೆ. ಇರುವೆಯ ಶಿಸ್ತು, ವಿಘ್ನಗಳಿಗೆ ಜಗ್ಗದಿರುವುದು, ಅಂತಃಕಲಹ ಇಲ್ಲದಿರುವುದು,
Read Moreರಾಮಾಶ್ರಮದಲ್ಲಿ ವೈಭವದ ಶ್ರೀರಾಮ ಪಟ್ಟಾಭಿಷೇಕ ರಾಮನ ಆದರ್ಶ ಪಾಲನೆಗೆ ರಾಘವೇಶ್ವರ ಶ್ರೀ ಸಲಹೆ
ಬೆಂಗಳೂರು: ರಾಮಾಯಣ ಪಾರಾಯಣದಿಂದ ಧಾರ್ಮಿಕ ವಾತಾವರಣ ನಿರ್ಮಾಣ ಸಾಧ್ಯ. ರಾಮಾಯಣದ ಸತ್ವ- ಶಕ್ತಿ ಅಂಥದ್ದು. ಇಂಥ ಅನೇಕ ಸನ್ನಿವೇಶಗಳು ಸ್ವತಃ ಅನುಭವಕ್ಕೆ ಬಂದಿವೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶ್ರೀರಾಮಶ್ರಮದಲ್ಲಿ ‘ಶ್ರೀರಾಮಸಾಮ್ರಾಜ್ಯ ಪಟ್ಟಾಭಿμÉೀಕ’ ನೆರವೇರಿಸಿ ಆಶೀರ್ವಚನ ನೀಡಿದ ಶ್ರೀಗಳು, ಆಡಳಿತ ಎಂದರೆ ರಾಮರಾಜ್ಯದ ನೆನಪಾಗುತ್ತದೆ. ರಾಮನ ನಂತರ ಕೋಟ್ಯಂತರ ರಾಜರು ಆಳಿದ್ದಾರಾದರೂ, ಇಂದಿಗೂ ರಾಮರಾಜ್ಯಕ್ಕೆ ಸಾಟಿಯಿಲ್ಲ. ಹಾಗೆಯೇ ರಾಮಾಯಣ ಆದಿಕಾವ್ಯವಾಗಿದ್ದು, ಅದರ ನಂತರ ಕೋಟ್ಯಂತರ ಕಾವ್ಯ ರಚನೆಯಾಗಿದ್ದರೂ, ರಾಮಾಯಣಕ್ಕೆ ಸಾಟಿಯಿಲ್ಲ. ರಾಮಾಯಣದ ಒಂದೊಂದು
Read More