ಸುದ್ದಿ
ಸ್ವಭಾಷಾ ಅಭಿಯಾನ ನಿರಂತರ: ರಾಘವೇಶ್ವರ ಶ್ರೀ
ಗೋಕರ್ಣ: ಮಠದ ಕೊನೆಯ ಶಿಷ್ಯರ ಕೊನೆಯ ಆಂಗ್ಲಪದ ನಿವೃತ್ತಿಯಾಗುವವರೆಗೂ ಸ್ವಭಾಷಾ ಅಭಿಯಾನ ನಡೆಯಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 55ನೇ ದಿನವಾದ ಮಂಗಳವಾರ ಬೆಂಗಳೂರಿನ ಕೆ.ಟಿ.ಶ್ರೀರಾಮ್ ದಂಪತಿಗಳಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು. ಹೊಸಪೇಟೆಯ ಸುಬ್ರಾಯ ಹೆಗಡೆ ಮಹಾಸೇವೆ ನೆರವೇರಿಸಿದರು. ಇದು ಕೇವಲ ನಮ್ಮ ಸಮಾಜ ಅಥವಾ ಭಾಷೆಗೆ ಮಾತ್ರ ಸೀಮಿತವಲ್ಲ; ಎಲ್ಲ ಭಾರತೀಯ ಭಾಷೆಗಳಿಗೆ ಅನ್ವಯಿಸುವಂಥದ್ದು ಮತ್ತು ಸಮಾಜದ ಎಲ್ಲ ವರ್ಗದಲ್ಲೂ ಇದು
Read Moreಸ್ವಭಾಷಾ ಚಾತುರ್ಮಾಸ್ಯಕ್ಕೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಭೇಟಿ
ಗೋಕರ್ಣ: ಅಶೋಕೆಯಲ್ಲಿ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಅವರ ಸ್ವಭಾಷಾ ಚಾತುರ್ಮಾಸ್ಯ ವ್ರತದ ಕಾರ್ಯಕ್ರಮಕ್ಕೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಭೇಟಿ ನೀಡಿ, ಶ್ರೀಸಂಸ್ಥಾನದವರ ದರ್ಶನಾಶೀರ್ವಾದ ಪಡೆದರು. ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಮಾತನಾಡಿ ಸ್ವಭಾಷಾ ಚಾತುರ್ಮಾಸ್ಯ ಪರಿಕಲ್ಪನೆಯ ಸುಂದರವಾಗಿದೆ. ಶ್ರೀಸಂಸ್ಥಾನದವರ ಪ್ರತಿಯೊಂದು ಯೋಚನೆಯಲ್ಲೂ ವಿಭಿನ್ನತೆಯಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಇದು ಈಗಿನ ಅವಶ್ಯಕತೆಯಾಗಿದೆ ಎಂದು ತಿಳಿಸಿದರು. ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ ಜಿ.ಎಲ್, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಪ್ರಧಾನ
Read Moreಸಾಗರ ನವರಾತ್ರ ನಮಸ್ಯಾ ಏಕಿಷ್ಟು ಸಂಭ್ರಮ…?
ನಮ್ಮ ಶ್ರೀಮಠಕ್ಕೆ ಕಾರ್ಯಕ್ರಮ ಎನ್ನುವುದು ಹೊಸತಲ್ಲ, ಜೊತೆಗೆ ನವರಾತ್ರಿಯೂ ಹೊಸತಲ್ಲ. ಅದೆಷ್ಟೋ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ವಿಭಿನ್ನವಾದ ಮತ್ತು ವಿಶಿಷ್ಟವಾದ ಕಾರ್ಯಕ್ರಮಗಳ ಆಯೋಜನೆ ಶ್ರೀಸಂಸ್ಥಾನದವರ ಮಾರ್ಗದರ್ಶನದಲ್ಲಿ ನಡೆದಿದೆ. ಒಂದೇ ವೇದಿಕೆಯಲ್ಲಿ ಸಹಸ್ರ ಸಂಖ್ಯೆಗೂ ಮೀರಿದ ಯತಿ ಸಮಾವೇಶದಿಂದ ಮೊದಲ್ಗೊಂಡು ನೂರು ಜನ ಗಣ್ಯರು ಪುಸ್ತಕವೊಂದರ ಲೋಕಾರ್ಪಣೆಯ ವೇದಿಕೆಯಲ್ಲಿ ಸೇರಿದ ವಿಶೇಷ ಕಾರ್ಯಕ್ರಮದವರೆಗೆ… ಹೀಗಿದ್ದೂ ಸಾಗರದ ನವರಾತ್ರ ನಮಸ್ಯಾ ಏಕೋ ಹೊಸತನದ ಕಾರ್ಯಕ್ರಮ ಎನ್ನುವ ಭಾವ ಜತಗೆ ಹರುಷ ಹಾಗೂ ಸಂಭ್ರಮ ಮನೆ ಮಾಡಿರುವುದು ಎದ್ದು ಕಾಣುತ್ತಿದೆ. ಇದಕ್ಕೆ
Read Moreಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನ ಉಳಿಸಿಕೊಳ್ಳೋಣ; ರಾಘವೇಶ್ವರ ಶ್ರೀ
ಗೋಕರ್ಣ: ನಮ್ಮ ಹಿರಿಯರು ಬಳಸುತ್ತಿದ್ದ ಪದಗಳನ್ನು ಮತ್ತೆ ಬಳಕೆಗೆ ತರುವ ಮೂಲಕ ನಾವು ನಾವಾಗೋಣ; ಆಂಗ್ಲರ ಅಂಧಾನುಕರಣೆ ತೊರೆದು ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಕರೆ ನೀಡಿದರು. ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 54ನೇ ದಿನವಾದ ಸೋಮವಾರ ಮಂಗಳೂರು ಮಂಡಲದ ಕನ್ಯಾನ, ಬಾಯಾರು, ಕೋಳ್ಯೂರು, ವಿಟ್ಲ, ಕೇಪು ಮತ್ತು ಕಲ್ಲಡ್ಕ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಕನ್ನಡ ಭಾಷೆಯಲ್ಲಿ ಕಲಬೆರಕೆಯಾಗಿರುವ ಆಂಗ್ಲ ಮತ್ತು
Read Moreಪರಿಸರ ಸ್ನೇಹಿ ಅವಜಲ ಘಟಕ ಲೋಕಾರ್ಪಣೆ
ಗೋಕರ್ಣ: ವಿವಿವಿ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪರಿಸರ ಸ್ನೇಹಿ ಅವಜಲ ಘಟಕವನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಲೋಕಾರ್ಪಣೆಗೊಳಿಸಿದರು. ಶ್ರೀಸಂಸ್ಥಾನದವರು ರಾಸಾಯನಿಕ ರಹಿತ, ಕೇವಲ ತುಳಸಿ, ಸ್ಫಟಿಕ ಮತ್ತು ಹಾಸುಗಲ್ಲು ಬಳಸಿ ಘಟಕ ನಿರ್ಮಿಸಿದ ಬಾಲಚಂದ್ರ ಹೆಗಡೆ ಮತ್ತು ಗಜಾನನ ಹೆಗಡೆಯವರನ್ನು ಸನ್ಮಾನಿಸಿ ಆಶೀರ್ವದಿಸಿದರು. “ಪ್ರಕೃತಿಯಲ್ಲಿ ಸಿಗುವುದೆಲ್ಲವೂ ಶುದ್ಧ. ನಾವು ಅದನ್ನು ಮಲಿನಗೊಳಿಸುತ್ತೇವೆ. ಉಪಯೋಗಿಸಿ ಅಶುದ್ಧವಾದ್ದನ್ನು ಶುದ್ಧ ಮಾಡುವುದು ಪ್ರವಾಹದ ವಿರುದ್ಧ ಈಜಿದಂತೆ. ಕೊಳಚೆ ನೀರನ್ನು ಬಾವಿ ನೀರಿನಷ್ಟೇ ಶುದ್ಧಗೊಳಿಸುವ ಈ ಅವಜಲ ಘಟಕ ಎಲ್ಲೆಡೆಗೆ
Read Moreಹವ್ಯಕ ಭಾಷೆ ಅಧ್ಯಯನ, ಸಂಶೋಧನೆಗೂ ಅವಕಾಶ: ರಾಘವೇಶ್ವರ ಶ್ರೀ – ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಸ್ಥಾಪನೆ
ಗೋಕರ್ಣ: ಸ್ವಭಾಷಾ ಚಾತುರ್ಮಾಸ್ಯದ ಸವಿನೆನಪಾಗಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಸ್ವಭಾಷಾ ಪೀಠ ಮತ್ತು ಹವ್ಯಕ ಅಧ್ಯಯನ ಪೀಠವನ್ನು ಆರಂಭಿಸಲಾಗುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಪ್ರಕಟಿಸಿದರು. ಸ್ವಭಾಷಾ ಚಾತುರ್ಮಾಸ್ಯದ 53ನೇ ದಿನವಾದ ಭಾನುವಾರ ಮಂಗಳೂರು ಮಂಡಲದ ಮಂಗಳೂರು ಮಧ್ಯ, ಉತ್ತರ, ದಕ್ಷಿಣ, ಉಡುಪಿ, ಕುಂದಾಪುರ ಮತ್ತು ಮುಡಿಪು ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ಕನ್ನಡದ ಕವಿರಾಜ ಮಾರ್ಗದ ರೀತಿಯಲ್ಲಿ ಹವ್ಯಕ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಗುರುರಾಜಮಾರ್ಗ ಅನುಷ್ಠಾನಕ್ಕೆ ಬರಲಿದೆ. ಚಾತುರ್ಮಾಸ್ಯದ ಬಳಿಕವೂ ಸ್ವಭಾಷಾ ಅಭಿಯಾನ
Read Moreಶ್ರೀರಾಮಾಶ್ರಮದ ಪುನರ್ವಸು ಭವನದಲ್ಲಿ ಶಾಸನತಂತ್ರ – ಸೇವಾಖಂಡ ಕಾರ್ಯಾಗಾರ
ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಬೆಂಗಳೂರು ಶಾಖೆ ಶ್ರೀರಾಮಾಶ್ರಮದ ಪುನರ್ವಸು ಭವನದಲ್ಲಿ ಭಾನುವಾರ ಸೇವಾಖಂಡದ ಕಾರ್ಯಾಗಾರ ನಡೆಯಿತು. ಗುರುಮಂದಿರ, ಶ್ರೀರಾಮ ದೇವರ ಸನ್ನಿಧಿ ಗಣಪತಿ ಮತ್ತು ಸುಬ್ರಹ್ಮಣ್ಯ ಸನ್ನಿಧಿ ಗುರುಪೀಠಗಳ ಮುಂಭಾಗದಲ್ಲಿ ಫಲ ಸಮರ್ಪಣೆ ಮಾಡಿ ಪ್ರಾರ್ಥನೆ ಮಾಡಲಾಯಿತು. ದೀಪ ಪ್ರಜ್ವಲನ, ಫಲ ಸಮರ್ಪಣೆ, ಗುರುವಂದನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ವಿದ್ವಾನ್ ಶಿವರಾಮ ಅಗ್ನಿಹೋತ್ರಿ ಸೇವಾ ಮನೋಭಾವನೆ ಬೆಳೆಸಿಕೊಳ್ಳುವ ರೀತಿ, ಕಾರ್ಯಕರ್ತರ ನಡವಳಿಕೆ ಬಗ್ಗೆ ಮನೋಜ್ಞವಾಗಿ ತಿಳಿಸಿ ಕೊಟ್ಟರು. ಯೋಜನಾ ಖಂಡದ ಶ್ರೀಸಂಯೋಜಕರಾದ ವಿದ್ವಾನ್ ಜಗದೀಶ ಶರ್ಮಾ ಅರ್ಹತೆಯ ಅಷ್ಟ
Read Moreಜನಮನ ಸೆಳೆದ ಪಾಕವೈಭವ- ನಾಳೆ ಸೇವಾಸೌಧ ಸಮರ್ಪಣೆ
ಗೋಕರ್ಣ: ಶ್ರೀರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ದೇವತೋಪಾಸನೆ, ತಪಸ್ಸು, ಸಚ್ಚಿಂತನೆ, ಕಾರ್ಯಾನ್ವಯದ ಉದ್ದೇಶದಿಂದ ಶಿಷ್ಯಭಕ್ತರು ಸುಮಾರು ಐದು ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಅಶೋಕೆಯಲ್ಲಿ ನಿರ್ಮಿಸಿರುವ ವಿಶಿಷ್ಟ ‘ಸೇವಾಸೌಧ’ ಸಮರ್ಪಣಾ ಸಮಾರಂಭ ಶನಿವಾರ (ಜನವರಿ 28) ನಡೆಯಲಿದೆ. ಸ್ವಸ್ಥ ಮತ್ತು ಸಮರ್ಥ ಜಗತ್ತಿನ ನಿರ್ಮಾಣಕ್ಕೆ ಸುಯೋಗ್ಯ ಶಿಕ್ಷಣದ ಅಗತ್ಯತೆಯನ್ನು ಪರಿಕಲ್ಪಿಸಿ, ಭಾರತದ ಪ್ರಾಚೀನ ಶಿಕ್ಷಣ ವಿನ್ಯಾಸ ಹಾಗೂ ಶಿಕ್ಷಣಕ್ರಮಕ್ಕೆ ಕಾಯಕಲ್ಪ ಒದಗಿಸಬೇಕು ಎಂಬ ಮಹದಾಶಯದೊಂದಿಗೆ ಪರಮಪೂಜ್ಯರು ಅನುಷ್ಠಾನಗೊಳಿಸುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠಮ್‍ನ
Read Moreಧರ್ಮಕಾರ್ಯ, ಶಾಶ್ವತ ಕಾರ್ಯಗಳಿಗೆ ನೆರವಾಗುವುದೇ ಸತ್ಕಾರ್ಯ: ರಾಘವೇಶ್ವರ ಶ್ರೀ
ಮಾಣಿ: ದುಂದುವೆಚ್ಚಕ್ಕೆ ಕಡಿವಾಣ ಹಾಕಿಕೊಂಡು, ಸರಳ ಜೀವನ ಅಳವಡಿಸಿಕೊಂಡು ಸಮಾಜದ ಶಾಶ್ವತ ಕಾರ್ಯಗಳಿಗೆ ಧರ್ಮಕಾರ್ಯಗಳಿಗೆ ಕೊಡುಗೆ ನೀಡುವ ಮೂಲಕ ಸತ್ಕಾರ್ಯದಲ್ಲಿ ತೊಡಗಿಸಿಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು. ಮಾಣಿ ಮಠದಲ್ಲಿ ನೂತನ ಶಿಲಾಮಯ ಗರ್ಭಾಗಾರದಲ್ಲಿ ಸಪರಿವಾರ ಶ್ರೀರಾಮದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಸರಳ ಜೀವನದಲ್ಲಿರುವ ಸುಖ- ಶ್ರೇಯಸ್ಸು ಯಾವುದರಲ್ಲೂ ಇಲ್ಲ. ಒಂದು ತುತ್ತು ಕಡಿಮೆ ಉಂಡು ಅದನ್ನು ಸಮಾಜಕ್ಕೆ ನೀಡಿ ಎಂಬ
Read Moreಗುಂಪೆ ವಲಯ ಸಭೆ
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ಮುಳ್ಳೇರಿಯ ಮಂಡಲಾಂತರ್ಗತ ಗುಂಪೆ ವಲಯ ಸಭೆಯು ದಿನಾಂಕ ೦1 – 01 – 2023 ಆದಿತ್ಯವಾರ ಗುಂಪೆ ವಲಯ ಕಛೇರಿಯಲ್ಲಿ ನಡೆಯಿತು. ಶಂಖನಾದ , ಗುರುವಂದನೆ , ಗೋಸ್ತುತಿಯೊಂದಿಗೆ ಆರಂಭವಾದ ಸಭೆಯ ಅಧ್ಯಕ್ಷತೆಯನ್ನು ವಲಯಾಧ್ಯಕ್ಷರಾದ ಬಿ.ಎಲ್. ಶಂಭು ಹೆಬ್ಬಾರ್ ವಹಿಸಿದರು. ಕಾರ್ಯದರ್ಶಿ ಕೇಶವ ಪ್ರಸಾದ ಎಡಕ್ಕಾನ ಗತಸಭೆಯ ವರದಿ ಮತ್ತು ಮಹಾಮಂಡಲ ಸುತ್ತೋಲೆಯನ್ನು ವಾಚಿಸಿ ವಿಭಾಗವಾರು ವರದಿಗಳನ್ನು ನೀಡಿದರು. ಕೋಶಾಧ್ಯಕ್ಷರಾದ ರಾಜಗೋಪಾಲ ಅಮ್ಮಂಕಲ್ಲು ಡಿಸೆಂಬರ್ ತಿಂಗಳ ವಲಯ
Read Moreರಾಮನ ಹಾದಿಯಲ್ಲಿ ಮುನ್ನಡೆಯೋಣ : ರಾಘವೇಶ್ವರ ಶ್ರೀ ಕರೆ
ಮಂಗಳೂರು: ಮಠವನ್ನು ಕಟ್ಟಿ ರಾಮನಿಗೆ ಕಾಣಿಕೆಯಾಗಿ ಸಮರ್ಪಿಸುವ ಪವಿತ್ರ ಸಂದರ್ಭದಲ್ಲಿ ರಾಮ ನಡೆದ ಹಾದಿಯಲ್ಲಿ ಮುನ್ನಡೆಯುವ ಪಣ ತೊಡಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಕರೆ ನೀಡಿದರು.ಮಾಣಿ ಮಠದ ಸಪರಿವಾರ ಶ್ರೀರಾಮಚಂದ್ರದೇವರ ಶಿಲಾಮಯ ಗರ್ಭಗುಡಿ ನಿರ್ಮಾಣದ ಕಾಮಗಾರಿ ವೀಕ್ಷಿಸಿ, ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಶಿಷ್ಯರ ಮಾರ್ಗದರ್ಶನ ಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು.ನಮ್ಮತನ ಉಳಿಸೋಣ. ನಮ್ಮ ಆಚರಣೆ ಸಂಪ್ರದಾಯ, ಸಂಸ್ಕøತಿ, ಭಾಷೆ, ನಾಡು ನುಡಿ ಉಳಿಸಲು ನಮ್ಮಿಂದಾದ ಕೊಡುಗೆ ನೀಡೋಣ.
Read Moreಸಮಾಜಕ್ಕೆ ಅಮೃತ ನೀಡುವ ಪಣ ತೊಡಿ: ಕಾರ್ಯಕರ್ತರಿಗೆ ರಾಘವೇಶ್ವರ ಶ್ರೀ ಸಲಹೆ
ಗೋಕರ್ಣ: ಶ್ರೀಮಠದ ಸಮಸ್ತ ಪರಿವಾರ ಜೇನು ಗೂಡಿನಂತೆ. ಶ್ರೀಪೀಠ ರಾಣಿ ಹುಳದಂತೆ. ನಾವೆಲ್ಲ ಸೇರಿ ಜೇನು ಮಾತ್ರವಲ್ಲ; ಇಡೀ ಸಮಾಜಕ್ಕೆ ಅಮೃತವನ್ನೇ ಉಣಬಡಿಸೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ ನುಡಿದರು. ಅಶೋಕೆ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾನುವಾರ ಸಂಪನ್ನಗೊಂಡ ಗುರುಕುಲ ಚಾತುರ್ಮಾಸ್ಯದ ಕಾರ್ಯಕರ್ತರ ಸಮ್ಮಿಲನದಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಕಾರ್ಯಕರ್ತರಲ್ಲಿ ಮಹಾಕಾಳಿಯ ಕೃಪೆ ಹಾಗೂ ಶಕ್ತಿಯ ಸಂಚಯನವಾಗಲಿ. ದೊಡ್ಡ ಸೇವೆಗೆ ಆಂಜನೇಯನ ಶಕ್ತಿ ಹಾಗೂ ವಿನಮ್ರತೆ ಎಲ್ಲ ಕಾರ್ಯಕರ್ತರಲ್ಲಿ ಬರಲಿ ಎಂದು ಆಶಿಸಿದರು.
Read More” ಸ್ವಯಂವರ ” ಕಾದಂಬರಿ ಲೋಕಾರ್ಪಣೆ
ಗೋಕರ್ಣ : ಗೋಕರ್ಣದ ಅಶೋಕೆಯಲ್ಲಿ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ ಕರಕಮಲಗಳಿಂದ ಕಾಸರಗೋಡಿನ ಶ್ರೀಮುಖ ಮಾತೃತ್ವಮ್ ಲೇಖಕಿ ಪ್ರಸನ್ನಾ ವಿ ಚೆಕ್ಕೆಮನೆ ಅವರ ಹವ್ಯಕ ಕಾದಂಬರಿ ” ಸ್ವಯಂವರ ” ಅಕ್ಟೋಬರ್ 1 ರಂದು ಲೋಕಾರ್ಪಣೆಗೊಂಡಿತು. ನವರಾತ್ರಿಯ ಆರನೇ ದಿನ ಬಿಡುಗಡೆಯಾದ ಈ ಕೃತಿಯು ಲೇಖಕಿಯ ಆರನೆಯ ಕೃತಿಯಾಗಿದೆ. ಚಿಕ್ಕಮಗಳೂರಿನ ಅಪರಂಜಿ ಪ್ರಕಾಶನದ ಮೂಲಕ ಪ್ರಕಟವಾದ ಈ ಕಾದಂಬರಿಗೆ ಒಪ್ಪಣ್ಣ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಮಹೇಶ್ ಎಳ್ಯಡ್ಕ ಮುನ್ನುಡಿ ಬರೆದಿದ್ದಾರೆ.
Read Moreಅಶೋಕೆಯಲ್ಲಿ ಗುರುಕುಲ ಚಾತುರ್ಮಾಸ್ಯ ಸಂಪನ್ನ ವಿಷ್ಣುಗುಪ್ತ ವಿವಿಯಲ್ಲಿ ಅಹಿಚ್ಛತ್ರ ಕ್ಯಾಂಪಸ್ ಶೀಘ್ರ: ರಾಘವೇಶ್ವರ ಶ್ರೀ
ಗೋಕರ್ಣ: ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದಲ್ಲಿ ಅಹಿಚ್ಛತ್ರ ಕ್ಯಾಂಪಸ್ ನಿರ್ಮಾಣ ಕಾರ್ಯ ಶೀಘ್ರ ಆರಂಭವಾಗಲಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿ ಪ್ರಕಟಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ನಡೆದ ಗುರುಕುಲ ಚಾತುರ್ಮಾಸ್ಯ ಸೀಮೋಲ್ಲಂಘನ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ನಮ್ಮ ಸಮಾಜದ ನಡೆ- ನುಡಿ, ಆಹಾರ- ವಿಹಾರ, ಸಂಸ್ಕøತಿ- ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಈ ವಿಶಿಷ್ಟ ಕ್ಯಾಂಪಸ್ ಇಡೀ ದೇಶಕ್ಕೆ ಆದರ್ಶವಾಗಲಿದೆ. ಈ ಅಹಿಚ್ಛತ್ರ ಮುಂದೊಂದು ದಿನ ವಿಶ್ವದ ಬೆಳಕಾಗಲಿದೆ ಎಂದು ನುಡಿದರು.
Read Moreಮೋಹದ ಕ್ಷಯ ಮೋಕ್ಷಕ್ಕೆ ಕಾರಣ: ರಾಘವೇಶ್ವರ ಶ್ರೀ
ಗೋಕರ್ಣ: ಮೋಹದ ಕ್ಷಯವೇ ಮೋಕ್ಷಕ್ಕೆ ಕಾರಣ. ಮೋಕ್ಷ ಬೇಕಾದರೆ ಮೋಹ ಕ್ಷಯವಾಗಬೇಕು. ದಾನ ಮಾಡುವಾಗ ಆ ದ್ರವ್ಯದ ಮೇಲಿನ ಮೋಹ ಕಳೆದುಕೊಂಡು ಸತ್ಕಾರ್ಯಕ್ಕೆ ಅರ್ಪಿಸುವುದು ಸರ್ವಶ್ರೇಷ್ಠ ದಾನ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಹತ್ತನೇ ದಾನ ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ದಾನ ಮಾಡುವಾಗ ಆ ದ್ರವ್ಯದ ಮೇಲಿನ ಮೋಹ ಕಳೆದುಕೊಂಡು ಸತ್ಕಾರ್ಯಕ್ಕೆ
Read Moreತಪ್ಪು ಮಾಡದಿರುವುದು ಧೈರ್ಯದ ಮೂಲ: ರಾಘವೇಶ್ವರ ಶ್ರೀ
ಗೋಕರ್ಣ: ಆಧ್ಯಾತ್ಮಿಕ ಜೀವನ ಹಾಗೂ ಸಾಮಾನ್ಯ ಜೀವನಕ್ಕೆ ಧೈರ್ಯ ಅಥವಾ ಸ್ಥಿರಚಿತ್ತ ಅಗತ್ಯ. ತಪ್ಪು ಮಾಡದಿರುವುದು ಧೈರ್ಯದ ಮೂಲ. ತಪ್ಪು ಮಾಡುವವ ಸಹಜವಾಗಿಯೇ ಭಯಕ್ಕೆ ಶರಣಾಗುತ್ತಾನೆ. ತಪ್ಪು ಮಾಡದಿದ್ದರೆ ನಿಶ್ಚಿಂತೆಯಿಂದ, ಧೈರ್ಯದಿಂದ ಇರುತ್ತಾನೆ. ತಪ್ಪು ಮಾಡದಿರುವುದನ್ನು ರೂಢಿಸಿಕೊಂಡಲ್ಲಿ ಸಹಜವಾಗಿಯೇ ನಿಜವಾದ ಧೈರ್ಯ ನಮಗೆ ಬರುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಸಲಹೆ ಮಾಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ
Read Moreವಿನಾಯಕ ಚೌತಿ ಚಿತ್ರ ಸ್ಪರ್ಧೆ..
ವಿನಾಯಕ ಚೌತಿ ಮತ್ತೆ ಬಂದಿದ್ದು, ಹೊಸ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಶ್ರೀಮುಖ ತಂಡ ವಿನಾಯಕ ಚೌತಿ ಚಿತ್ರ ಸ್ವರ್ಧೆಯನ್ನು ಏರ್ಪಸಿದೆ. ಚಿತ್ರಗಳನ್ನು ಬಿಡಿಸುವವರ ಗಮನಕ್ಕೆ 1.ನಿಮ್ಮ ಸ್ವಂತ ಕಲ್ಪನೆಯನ್ನು ಎ೪ ಹಾಳೆಯಲ್ಲಿ ಬಿಡಿಸಿ 2.ಬಣ್ಣದ ಚಿತ್ರಗಳು, ಕಪ್ಪು ಬಿಳುಪು ಚಿತ್ರ, ಚುಕ್ಕಿ ಚಿತ್ರಗಳನ್ನು ಪರಿಗಣಿಸಲಾಗುವುದು 3.ಆಗಸ್ಟ್ 30 ರ ರಾತ್ರಿ 7 ಗಂಟೆ ಮೊದಲು ಬಂದ ಚಿತ್ರಗಳನ್ನು ಪರಿಗಣಿಸಲಾಗುವುದು 4.ಸ್ಕ್ಯಾನ್ ಮಾಡಿ ಮಿಂಚಂಚೆ ಮೂಲಕವೇ ಕಳುಹಿಸಬೇಕು ಮಿಂಚಂಚೆ ವಿಷಯದಲ್ಲಿ ಖಂಡ್ಡಾಯವಾಗಿ ವಿಭಾಗ, ಹೆಸರು, ವಿಳಾಸ, ಘಟಕ, ವಲಯ, ಮಂಡಲ
Read Moreನಿಮ್ಮ ನಿಯಂತ್ರಣದಲ್ಲಿದ್ದರೆ ಕ್ರೋಧವೂ ದೋಷವಲ್ಲ- ರಾಘವೇಶ್ವರ ಶ್ರೀ
ಗೋಕರ್ಣ: ಕ್ರೋಧದ ನಿಯಂತ್ರಣದಲ್ಲಿ ನೀವಿದ್ದಾಗ ಕ್ರೋಧ ದೋಷ. ನಿಮ್ಮ ನಿಯಂತ್ರಣದಲ್ಲಿ ಕೋಪ ಇದ್ದಾಗ ಅದು ಗುಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ವಿಶ್ಲೇಷಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿ, ಕೋಪ ಇರುವುದು ಆತ್ಮರಕ್ಷಣೆಗೆ; ಆದರೆ ಅದು ಇನ್ನೊಬ್ಬರಿಗೆ ಹಾನಿಯನ್ನು ಉಂಟು ಮಾಡಬಾರದು. ನಮ್ಮ ನಿಯಂತ್ರಣದಲ್ಲಿರುವ ಕೋಪ ಪ್ರತಿಯೊಬ್ಬರಿಗೂ ಬೇಕು ಎಂದು ಮಾರ್ಮಿಕವಾಗಿ ನುಡಿದರು. ರಾಮ ಸ್ಥಾನಕ್ರೋಧ- ಜಿತಕ್ರೋಧ ಎಂಬ ಉಲ್ಲೇಖ
Read Moreಪ್ರೀತಿ ಹೃದಯ ಬೆಸೆದರೆ ಕೋಪ ದೂರ ಮಾಡುವಂಥದ್ದು: ರಾಘವೇಶ್ವರ ಶ್ರೀ
ಗೋಕರ್ಣ: ಪ್ರೀತಿ ಹೃದಯಗಳನ್ನು ಹತ್ತಿರ ತಂದರೆ ಕೋಪ ಹೃದಯಗಳನ್ನು ದೂರ ಮಾಡುತ್ತದೆ; ಜೀವ- ಜೀವಗಳನ್ನು, ಜೀವ- ದೇವರನ್ನೂ ದೂರ ಮಾಡುವಂಥದ್ದು. ಅರಿಷಡ್ವರ್ಗಗಳಲ್ಲಿ ಒಂದಾದ ಕ್ರೋಧ, ಮನಸ್ಸುಗಳ ಮಧ್ಯೆ, ಹೃದಯಗಳ ಮಧ್ಯೆ ಗೋಡೆ ಕಟ್ಟುವ ಕೆಲಸ ಮಾಡುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯಲ್ಲಿ ಪರಮಪೂಜ್ಯರು ಆಶೀರ್ವಚನ ನೀಡಿದರು. ಭಾವ ಅಥವಾ ಪ್ರೀತಿ ಬೆಳೆದಂತೆ ಭಾಷೆ ಮೂಕವಾಗುತ್ತದೆ. ಭಾವ
Read Moreಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ಜೀವನ ಹಸನು: ರಾಘವೇಶ್ವರ ಶ್ರೀ
ಗೋಕರ್ಣ: ಸಿಟ್ಟು ನಿಯಂತ್ರಣಕ್ಕೆ ಬಂದಷ್ಟೂ ನಮ್ಮ ಜೀವನ ಹಸನಾಗುತ್ತದೆ; ನಮ್ಮ ಕೋಪ, ತೊಂದರೆಗಳಿಗೆ ನಮ್ಮ ಕರ್ಮಗಳೇ ಕಾರಣ ಎಂಬ ಭಾರತೀಯರ ಕರ್ಮ ಸಿದ್ಧಾಂತವನ್ನು ಅರ್ಥ ಮಾಡಿಕೊಂಡರೆ ಜೀವನದಲ್ಲಿ ಯಾರ ಮೇಲೂ ಸಿಟ್ಟು ಮಾಡಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ ಅಥವಾ ಯಾರನ್ನೂ ನಾವು ದ್ವೇಷಿಸುವುದಿಲ್ಲ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಕೋಪ ನಮ್ಮ ಬದುಕಿನಲ್ಲಿ
Read More