ಸುದ್ದಿ
ಮಾತೃತ್ವಮ್ ‘ ನ ಮಂಗಳೂರು ನಗರಸಮಿತಿಯ ಸಭೆ
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿರುವ ‘ ಮಾತೃತ್ವಮ್ ‘ ನ ಮಂಗಳೂರು ನಗರಸಮಿತಿಯ ಸಭೆಯು 18 – 07 – 2022 ರಂದು ಅಂತರ್ಜಾಲದ ಗೂಗಲ್ ಮೀಟ್ ಮೂಲಕ ನೆರವೇರಿತು. ಗುರುವಂದನೆ ಗೋಸ್ತುತಿಯೊಂದಿಗೆ ಆರಂಭವಾದ ಸಭೆಯಲ್ಲಿ ಮಂಗಳೂರು ನಗರಸಮಿತಿ ಅಧ್ಯಕ್ಷೆ ಜ್ಯೋತಿಲಕ್ಷ್ಮಿ ಅಮೈ ಪ್ರಾಸ್ತಾವಿಕ ನುಡಿಗಳನ್ನಾಡಿ ಮಂಗಳೂರು ನಗರದ ಮಾತೃತ್ವಮ್ ಸಮಿತಿಯ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ತಿಳಿಸಿದರು. ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು ” ಮಂಗಳೂರು ನಗರಸಮಿತಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ
Read Moreಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ- ರಾಘವೇಶ್ವರ ಶ್ರೀ
ಗೋಕರ್ಣ: ಸಿಟ್ಟು ಎಂಬ ಬೆಂಕಿ ಮೊದಲು ನಮ್ಮನ್ನು ಸುಡುತ್ತದೆ; ಆ ಬಳಿಕ ಇತರರನ್ನು ಸುಡುತ್ತದೆ. ಕ್ರೋಧವೆಂಬ ಬೆಂಕಿ ನಮ್ಮ ಮನಸ್ಸು, ಬದುಕು, ಸಂಬಂಧ ಹೀಗೆ ಎಲ್ಲವನ್ನೂ ಸುಡುತ್ತದೆ. ಆದ್ದರಿಂದ ಜೀವನದಲ್ಲಿ ಸಂಯಮ ಎಲ್ಲಕ್ಕಿಂತ ಮುಖ್ಯ. ಸಿಟ್ಟನ್ನು ಗೆಲ್ಲುವ ಶಕ್ತಿಯನ್ನು ಶ್ರೀರಾಮ ನಮಗೆಲ್ಲ ಕರುಣಿಸಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಸಿಟ್ಟಿನ ಪರಿಣಾಮ ಎಂದೂ ಒಳ್ಳೆಯದಾಗುವುದಿಲ್ಲ.
Read Moreಮಾತೃತ್ವ ಗೌರವಿಸುವುದು ಸಮಾಜದ ಕರ್ತವ್ಯ: ರಾಘವೇಶ್ವರ ಶ್ರೀ
ಗೋಕರ್ಣ: ಮಹಿಳೆಯ ಮಾತೃತ್ವವನ್ನು ಗೌರವಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಭಾನುವಾರ ನಡೆದ ಮಾತೃ ಸಮಾವೇಶದಲ್ಲಿ ಆಶೀರ್ವಚನ ನೀಡಿದ ಅವರು, ಮಹಿಳೆಯಾಗಿ ಹುಟ್ಟುವಾಗಲೇ ಆಕೆ ದೇವಿಯ ಸ್ವರೂಪವಾಗಿ ಹುಟ್ಟುತ್ತಾಳೆ. ಹೆಣ್ಣನ್ನು ನೋಯಿಸುವ ಹಕ್ಕು ಯಾರಿಗೂ ಇಲ್ಲ. ಅದು ಅತ್ಯಂತ ಪಾಪದ ಕಾರ್ಯ. ಆಕೆ ಕಣ್ಣೀರು ಇಟ್ಟರೆ ಅದು ಶಾಪ. ಮಹಿಳೆ ಸಂತೋಷವಾಗಿದ್ದರೆ ಮಾತ್ರ ಶ್ರೇಯಸ್ಸು ಎಂದು
Read Moreಸನಾತನ ಸಂಸೃತಿಯ ಅರಿವು ಅಗತ್ಯ: ರಾಘವೇಶ್ವರ ಶ್ರೀ
ಗೋಕರ್ಣ: ಇಂದಿನ ಸಮಾಜಕ್ಕೆ ಸನಾತನ ಧರ್ಮದ ಬಗ್ಗೆ ಅಭಿರುಚಿ ಇದೆ. ಆದರೆ ಅರಿವು ಇಲ್ಲ. ಈ ಅರಿವನ್ನು ಮೂಡಿಸುವ ಪ್ರಯತ್ನವನ್ನು ‘ಆಯತನ’ ಗ್ರಂಥದ ಕನ್ನಡಾನುವಾದ ಗ್ರಂಥ ಮಾಡಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಶನಿವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಆರ್.ಎಸ್.ಹೆಗಡೆಯವರ ಶತಮಾನಗಳಷ್ಟು ಹಳೆಯ ಆಯತನ ಎಂಬ ಕನ್ನಡಾನುವಾದ ಗ್ರಂಥವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. “ಸನಾತನ ಧರ್ಮದ ಬಗ್ಗೆ ಇಂದಿನ
Read More” ಶ್ರೀಮಠದ ಯೋಜನೆಗಳನ್ನು ಸಮರ್ಥವಾಗಿ ಕಾರ್ಯರೂಪಕ್ಕೆ ತರಲು ಮಾತೆಯರು ಸಂಘಟಿತರಾಗಬೇಕು ” : ಬಾಲಸುಬ್ರಹ್ಮಣ್ಯ ಭಟ್, ಸರ್ಪಮಲೆ
” ಶ್ರೀಮಠದ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ವಲಯದ ಪ್ರತೀ ಮನೆಯ ಮಾತೆಯರೂ ಸಂಘಟಿತರಾಗಬೇಕು. ಮುಷ್ಟಿ ಭಿಕ್ಷಾ ಯೋಜನೆ, ಕುಂಕುಮಾರ್ಚನೆ , ಮಾತೃತ್ವಮ್, ಶ್ರೀರಾಮಭುಜಂಗ ಪ್ರಯಾತ ಸ್ತೋತ್ರ ಪಠಣವೇ ಮೊದಲಾದ ಕಾರ್ಯಗಳನ್ನು ಸಮರ್ಪಕವಾಗಿ ಮುನ್ನಡೆಸುವುದೇ ಮಾತೃ ವಿಭಾಗದ ಮುಖ್ಯ ಉದ್ದೇಶ ” ಎಂದು ಮುಳ್ಳೇರಿಯ ಮಂಡಲ ಅಧ್ಯಕ್ಷರಾದ ಸರ್ಪಮಲೆ ಬಾಲಸುಬ್ರಹ್ಮಣ್ಯ ಭಟ್ ಆಶಯ ವ್ಯಕ್ತಪಡಿಸಿದರು. ಮುಳ್ಳೇರಿಯ ಮಂಡಲ ಮಾತೃವಿಭಾಗ ಹಾಗೂ ಮಾತೃತ್ವಮ್ ನ ಸಹಯೋಗದಲ್ಲಿ ಜುಲೈ ತಿಂಗಳ ವಿವಿಧ ದಿನಗಳಲ್ಲಿ ನಡೆದ ಮುಳ್ಳೇರಿಯ
Read Moreತಾಳ್ಮೆಯ ಸಂಪಾದನೆ ತಪಸ್ಸಿನಿಂದ ಸಾಧ್ಯ: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆಯ ಸಂಪಾದನೆ ಆಗುವುದು ತಪಸ್ಸಿನಿಂದ; ಅತಿಯಾದ ಸುಖ, ದುಃಖವನ್ನು ತಡೆದುಕೊಳ್ಳುವ ತಾಳ್ಮೆ ದೊರಕುವುದು ತಪಸ್ಸಿನಿಂದ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಸ್ವಾಮೀಜಿ ಹೇಳಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಬುಧವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ಬ್ರಹ್ಮಜ್ಞಾನವನ್ನು ಅನುಭವಿಸುವ ಯೋಗ್ಯತೆ ದೊರಕುವುದು ತಪಸ್ಸಿನಿಂದ ಮಾತ್ರ; ಅದನ್ನು ಅನುಭವಿಸಲು ಯೋಗಿಗಳಿಗೆ ಮಾತ್ರ ಸಾಧ್ಯವಾಗುತ್ತದೆ. ಯೋಗ್ಯತೆ ಇದ್ದರೆ ಮಾತ್ರವೇ ಯೋಗ ಬರಬೇಕು. ಎಂದು ಮಾರ್ಮಿಕವಾಗಿ ನುಡಿದರು. ಯೋಗ್ಯತೆ ಇಲ್ಲದವನಿಗೆ ಯೋಗ
Read Moreಮಾತೃತ್ವಮ್ ಕಾಸರಗೋಡು ನಗರಸಮಿತಿ ಸಭೆ
ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ ಮಾತೃತ್ವಮ್ ‘ ನ ಕಾಸರಗೋಡು ನಗರಸಮಿತಿಯ ಸಭೆಯು ಜುಲೈ ೨ ರಂದು ಮೊತ್ತಮೊದಲಾಗಿ ಅಂತರ್ಜಾಲದ ಗೂಗಲ್ ಮೀಟ್ ಮೂಲಕ ನೆರವೇರಿತು. ಗುರುವಂದನೆ ಗೋಸ್ತುತಿಯೊಂದಿಗೆ ಆರಂಭವಾದ ಸಭೆಯಲ್ಲಿ ಕಾಸರಗೋಡು ನಗರದ ಅಧ್ಯಕ್ಷೆ ಕುಸುಮ ಪೆರ್ಮುಖ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕಾಸರಗೋಡು ನಗರದ ಮಾತೃತ್ವಮ್ ಸಮಿತಿಯ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ ಸವಿಸ್ತಾರವಾಗಿ ತಿಳಿಸಿದರು. ಕೇಂದ್ರ ಸಮಿತಿ ಅಧ್ಯಕ್ಷರಾದ ಶ್ರೀಮತಿ ಈಶ್ವರಿ ಬೇರ್ಕಡವು ” ಕಾಸರಗೋಡು ನಗರಸಮಿತಿಯ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರಸ್ತುತ
Read Moreತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ”
Read Moreರಾಮಚಂದ್ರಾಪುರ ಮಠದಿಂದ ಗೋಮಯ ಕಾಗದ ಲೋಕಾರ್ಪಣೆ
ಗೋಕರ್ಣ: ಶ್ರೀ ರಾಮಚಂದ್ರಾಪುರ ಮಠದ ಕಾಮದುಘಾ ಮತ್ತು ಸಂಶೋಧನಾ ಖಂಡದ ವತಿಯಿಂದ ಗೋಮಯದಿಂದ ತಯಾರಿಸಿದ ಕಾಗದದ ಲೋಕಾರ್ಪಣೆಯನ್ನು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವಶ್ವರಭಾರತೀ ಮಹಾಸ್ವಾಮೀಜಿ ಸೋಮವಾರ ನೆರವೇರಿಸಿದರು. ಭಾರತೀಯ ಗೋತಳಿಯ ಸಂವರ್ಧನೆ, ಸಂರಕ್ಷóಣೆಯಲ್ಲಿ ತೊಡಗಿಸಿಕೊಂಡಿರುವ ಕಾಮದುಘಾ ವತಿಯಿಂದ ಗೋಮಯ ಕಾಗದ ತಯಾರಿಸಿರುವುದು ಅತ್ಯಂತ ಅರ್ಥಪೂರ್ಣ. ಶ್ರೀಮಠದಲ್ಲಿ ಇಂಥ ಪರಿಸರಸ್ನೇಹಿ ಕಾಗದದ ಬಳಕೆಯನ್ನು ಸಾಧ್ಯವಿರುವ ಎಲ್ಲ ಕಡೆಗಳಲ್ಲಿ ಮಾಡಲಾಗುವುದು ಎಂದು ಸ್ವಾಮೀಜಿ ಹೇಳಿದರು. ಇದು ರಾಸಾಯನಿಕ ಮುಕ್ತವಾಗಿರುವುದರಿಂದ ಪರಿಸರ ಸ್ನೇಹಿಯಾಗಿರುವುದು ಮಾತ್ರವಲ್ಲದೇ, ಗೋವಿನ ಉತ್ಪನ್ನಗಳ ಮೌಲ್ಯವರ್ಧನೆಯಲ್ಲೂ ಮಹತ್ವದ
Read Moreತಾಳ್ಮೆಗೆ ತಪಸ್ಸಿನ ಫಲವಿದೆ: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆಗೆ ತಪಸ್ಸಿನ ಫಲ ಇದೆ. ತಾಳ್ಮೆ ಕಳೆದುಕೊಂಡರೆ ಅದರಿಂದ ಅನಾಹುತವಾಗುತ್ತದೆ. ಆತುರ, ಆತಂಕ, ಉದ್ವೇಗ ಅನಾಹುತಕ್ಕೆ ಕಾರಣವಾಗುತ್ತದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಅಂಗವಾಗಿ ಸೋಮವಾರ ನಡೆದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, ದುಡುಕಿ, ಅವಸರದಲ್ಲಿ ಕಾರ್ಯಗಳನ್ನು ಮಾಡಿದಾಗ ವಿಚಾರಕ್ಕೆ ಅವಕಾಶವಾಗದೇ ಅನಾಹುಗಳು ಸಂಭವಿಸುತ್ತವೆ. ಸಮರ್ಪಕತೆ ಹಾಗೂ ವೇಗ ಬರುವುದು ನಿಧಾನದ ಅಭ್ಯಾಸದಿಂದ. ತಾಳ್ಮೆಯ ಮಹತ್ವ ಇದು ಎಂದು
Read Moreತಾಳ್ಮೆ ಜೀವನದ ಅಮೂಲ್ಯ ಸಂಪತ್ತು: ರಾಘವೇಶ್ವರ ಶ್ರೀ
ಗೋಕರ್ಣ: ತಾಳ್ಮೆ ಪ್ರತಿಯೊಬ್ಬರ ಜೀವನದ ಅಮೂಲ್ಯ ಸಂಪತ್ತು. ತಾಳ್ಮೆ ಎಂಬ ಮಹಾ ಸಂಪತ್ತು ನಮ್ಮೆಲ್ಲರ ಬದುಕಿನಲ್ಲಿ, ವ್ಯಕ್ತಿತ್ವದಲ್ಲಿ ಬರಲಿ; ಈ ಮೂಲಕ ಜೀವನ ಸುಖಮಯವಾಗಲಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಆಶಿಸಿದರು. ಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹನ್ನೊಂದನೇ ದಿನವಾದ ಶನಿವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ತಾಳ್ಮೆ ಕಡಿಮೆ ಇದ್ದರೆ, ನಿರೀಕ್ಷಿತ ಫಲ ಪಡೆಯಲು ಸಾಧ್ಯವಿಲ್ಲ. ತಾಳ್ಮೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕು. ಆಗ ಜೀವನ ಸುಂದರವಾಗುತ್ತದೆ” ಎಂದರು.
Read Moreತಾಳ್ಮೆ, ಸಹನೆಯಿಂದ ಅದ್ಭುತ ಸಾಧನೆ ಸಾಧ್ಯ: ರಾಘವೇಶ್ವರ ಶ್ರೀ
ಗೋಕರ್ಣ: ಮನುಸ್ಮøತಿಯಲ್ಲಿ ಉಲ್ಲೇಖಿಸಿದ ಹತ್ತು ಗುಣಗಳಲ್ಲಿ ಸಹನೆ, ಕ್ಷಮೆ, ತಾಳ್ಮೆ ಪ್ರಮುಖವಾದದ್ದು; ನಮ್ಮ ಜೀವನದ ಪ್ರತಿ ಹಂತದಲ್ಲಿ ಇದು ಅಗತ್ಯ. ತಾಳ್ಮೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಅದ್ಭುತಗಳನ್ನು ಸಾಧಿಸಬಹುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಹತ್ತನೇ ದಿನವಾದ ಶುಕ್ರವಾರ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದ ಅವರು, “ಸಹನೆಗೆ ಹೆಚ್ಚಿನ ಬಲ ಬೇಕು. ಅದ್ಭುತ ಮನೋಬಲವೂ ಬೇಕು. ಇಂಥ ಸಹನೆಯನ್ನು ನಾವು ರಾಮನಿಂದ ಪಡೆದುಕೊಳ್ಳಬೇಕು. ಕಷ್ಟ
Read Moreನಂಬಿಕೆ ಜೀವನಕ್ಕೆ ಅಮೃತ ಇದ್ದಂತೆ: ರಾಘವೇಶ್ವರ ಶ್ರೀ
ಗೋಕರ್ಣ: ನಂಬಿಕೆ ಎಂಬ ಭಾವ ಜೀವನಕ್ಕೆ ಅಮೃತ ಇದ್ದಂತೆ. ದೇವರು ನಮ್ಮನ್ನು ಕಾಪಾಡುವ ಬದಲು ಅಚಲವಾದ ನಂಬಿಕೆ ಅಥವಾ ಭರವಸೆಯೇ ನಮ್ಮನ್ನು ಕೋಟೆಯಾಗಿ ನಮ್ಮನ್ನು ಕಾಯುತ್ತದೆ. ಆದ್ದರಿಂದ ಎಲ್ಲರೂ ದೇವರು, ಧರ್ಮ, ಗುರುವಿನಲ್ಲಿ, ಒಳಿತಿನಲ್ಲಿ ನಂಬಿಕೆ ಇಟ್ಟುಕೊಳ್ಳೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಗಳು ನುಡಿದರು. ಅಶೋಕೆಯ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಎಂಟನೇ ದಿನವಾದ ಬುಧವಾರ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಬಲವಾದ ನಂಬಿಕೆ ಇದ್ದರೆ ಅದು
Read Moreಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಲಿ: ರಾಘವೇಶ್ವರ ಶ್ರೀ
ಗೋಕರ್ಣ: ಸಮಸ್ತ ಸಮಾಜಕ್ಕೆ ಸುಜ್ಞಾನದ ಬೆಳಕನ್ನು ಹರಿಸಿದ ಗುರುಪರಂಪರೆಯ ಪೂಜೆಯೇ ಗುರುಪೂರ್ಣಿಮೆಯ ವಿಶೇಷ. ಭಾರತದ ಜ್ಞಾನಪರಂಪರೆ ವಿಶ್ವಕ್ಕೆ ಬೆಳಕಾಗಬೇಕು ಎಂಬ ಮಹತ್ಸಂಕಲ್ಪದೊಂದಿಗೆ ಈ ಬಾರಿಯ ಚಾತುರ್ಮಾಸ್ಯವನ್ನು ಗುರುಕುಲ ಚಾತುರ್ಮಾಸ್ಯವಾಗಿ ಆಚರಿಸಲಾಗುತ್ತಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಗುರುಕುಲ ಚಾತುರ್ಮಾಸ್ಯ ಆರಂಭದ ದಿನ ಧರ್ಮಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದ ಪೂಜ್ಯರು, “ಗುರುಪೂರ್ಣಿಮೆ ಎನ್ನುವುದು ಜ್ಞಾನಚೈತನ್ಯದ ಪೂಜೆ. ಅಶೋಕೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಮೂಲ ಉದ್ದೇಶವೂ ಸುಜ್ಞಾನ ಪ್ರಸಾರ. ವಿಶ್ವವಿದ್ಯಾಪೀಠ ಕಟ್ಟಲು ಸಮಸ್ತ
Read Moreಧರ್ಮ ಜ್ಯೋತಿಗೆ ಕುಮಟಾದಲ್ಲಿ ಸ್ವಾಗತ
ಕುಮಟಾ : ಹವ್ಯಕರ ಮೂಲಸ್ಥಾನವಾದ ಹೊನ್ನಾವರದ ಹೈಗುಂದದಿಂದ ಗೋಕರ್ಣದ ಅಶೋಕಗೆ ತೆರಳುತ್ತಿರುವ ಧರ್ಮ ಜ್ಯೋತಿಯನ್ನು ಕುಮಟಾದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಪುಷ್ಪಾರ್ಚನೆಗೆ ಇರುವುದರ ಮೂಲಕ ಸ್ವಾಗತಿಸಿದರು. ಹೊನ್ನಾವರದಿಂದ ಹೊರಟ ಭವ್ಯ ಮೆರವಣಿಗೆಯಲ್ಲಿ ಹವ್ಯಕ ಮಹಾಮಂಡಲದ ಅಧ್ಯಕ್ಷರಾದ ಆರ್ .ಎಸ್ ಹೆಗಡೆ ಹರಿಗಿ, ಹೊನ್ನಾವರ ಮಂಡಲದ ಅಧ್ಯಕ್ಷ ಆರ್.ಜಿ ಹೆಗಡೆ ಹಾಗೂ ಪ್ರಮುಖರು ಹಾಜರಿದ್ದರು. ಶಾಸಕರ ಜೊತೆ ಬಿಜೆಪಿ ಪ್ರಮುಖರಾದ ವಿನೋದ್ ಪ್ರಭು ಹಾಗೂ ಇತರರು ಕುಮಟದಲ್ಲಿ ಧರ್ಮಜ್ಯೋತಿಯನ್ನು ಸ್ವಾಗತಿಸಿ ಮೆರವಣಿಗೆ
Read Moreಚಾತುರ್ಮಾಸ್ಯ: ರಾಘವೇಶ್ವರ ಶ್ರೀ ಪುರಪ್ರವೇಶ
ಗೋಕರ್ಣ: ಶ್ರೀಮಗ್ಗಜದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿಯವರ ಇಪ್ಪತ್ತೊಂಬತ್ತನೇ ಚಾತುರ್ಮಾಸ್ಯದ ಅಂಗವಾಗಿ ಶ್ರೀಗಳ ಪುರಪ್ರವೇಶ ಅಶೋಕೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ಚಾತುರ್ಮಾಸ್ಯ ವ್ರತ ಕೈಗೊಳ್ಳಲು ಆಗಮಿಸಿದ ಪರಮಪೂಜ್ಯರನ್ನು ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪು, ಡಿ.ಡಿ.ಶರ್ಮಾ, ಸತ್ಯನಾರಾಯಣ ಶರ್ಮಾ, ವಿವಿಧ ಸಮಾಜಗಳ ಗಣ್ಯರು ಸಕಲ ಗೌರವಗಳೊಂದಿಗೆ ಬರಮಾಡಿಕೊಂಡರು. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ ಇಪ್ಪತ್ತೊಂಬತ್ತನೇ ಚಾತುರ್ಮಾಸ್ಯ ವ್ರತ ಆಷಾಢ ಹುಣ್ಣಿಮೆಯಂದು ಬುಧವಾರ (ಜುಲೈ 13) ಅಶೋಕೆಯಲ್ಲಿ ಆರಂಭವಾಗಲಿದೆ. ಮಧ್ಯಾಹ್ನ 2.30ಕ್ಕೆ ನಡೆಯುವ
Read Moreನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳು : ಜೂ.19ರಂದು ಹಲಸು ಮೇಳ – ಆಹಾರೋತ್ಸವ
ಮಂಗಳೂರು: ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಗಳ ಆವರಣದಲ್ಲಿ ಹಲಸು ಮೇಳ – ಆಹಾರೋತ್ಸವ ಜೂ.19ರಂದು ಬೆಳಗ್ಗೆ ಗಂಟೆ 8ರಿಂದ ರಾತ್ರಿ ಗಂಟೆ 8ರವರೆಗೆ ನಡೆಯಲಿದೆ. ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಸಂಪೂರ್ಣ ಆಶೀರ್ವಾದ, ಮಾರ್ಗದರ್ಶನದೊಂದಿಗೆ ಈ ಮೇಳ ನಡೆಯಲಿದ್ದು ಕೃಷಿಕರು ಬೆಳೆಸುವ, ಬಳಸುವ ಆಹಾರ ವಸ್ತುಗಳನ್ನು ನಗರದ ಜನತೆಗೆ ತಲುಪಿಸುವ ಮತ್ತು ಸಂಘಟನೆಯನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಹಲಸು ಮೇಳ – ಆಹಾರೋತ್ಸವ ಏರ್ಪಡಿಸಲಾಗಿದೆ.
Read Moreವಾಸ್ತು, ಆಗಮದಿಂದ ದೇಗುಲಕ್ಕೆ ಶೋಭೆ: ರಾಘವೇಶ್ವರ ಶ್ರೀ
ಬೆಂಗಳೂರು: ದೇವಾಲಯಗಳು ಇತ್ತೀಚೆಗೆ ಶಾಸ್ತ್ರದ ಬದಲು ಆಡಂಬರದ ಪ್ರದರ್ಶನಕ್ಕೆ ಮಾತ್ರ ಎಂಬಂಥ ವಿಕಟ ಸ್ಥಿತಿ ಇದೆ. ವಾಸ್ತು, ಜ್ಯೋತಿಷ್ಯ, ಆಗಮಗಳು ಸರಿಯಾಗಿದ್ದಾಗ ಮಾತ್ರ ದೇವಾಲಯಕ್ಕೆ ಶೋಭೆ. ಆದ್ದರಿಂದ ದೇವಾಲಯಗಳು ಶಾಸ್ತ್ರೋಕ್ತವಾಗಿ ನಿರ್ಮಾಣಗೊಳ್ಳಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಮಹಾಗಣಪತಿ ದೇವಾಲಯದಲ್ಲಿ ಬುಧವಾರ ನಡೆದ ಅಷ್ಟಬಂಧ- ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಧರ್ಮಸಭೆಯಲ್ಲಿ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀವರ್ಚನ ನೀಡಿದರು. ದೇಗುಲಗಳು ನಮ್ಮ ಪರಂಪರೆಯ ಭಾಗ. ಭಾರತದ ಪರಂಪರೆ ಅನುಪಮವಾಗಿದ್ದು, ಪರಂಪರೆಯನ್ನು
Read Moreಗೋ ಸಹಿತ ಬದುಕು ಬದುಕಬೇಕು- ಶ್ರೀಸಂಸ್ಥಾನ
ಗೋವು ಶೂನ್ಯ ಬದುಕು ನಮ್ಮದಾಗಬಾರದು. ಗೋ ಸಹಿತ ಬದುಕು ಬದುಕಬೇಕು ಎಂದು ಶ್ರೀಸಂಸ್ಥಾನ ಗೋಕರ್ಣ ಶ್ರೀರಾಮಚಂದ್ರಾಪುರ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಹೇಳಿದರು. ಅವರು ಗೋಸ್ವರ್ಗದಲ್ಲಿ ಕಾಮದುಘಾ ಟ್ರಸ್ಟ್ ಹಾಗೂ ಮುಂಬಯಿ ದಿನೇಶ್ ಶಹರಾ ಪೌಂಡೇಶನ್ ಆಶ್ರಯದಲ್ಲಿ ಅನುಪಮ ಗೋಸೇವಕರಿಗಾಗಿ ನೀಡಲ್ಪಡುವ ರಾಜ್ಯ ಮಟ್ಟದ ಗೋಪಾಲ ಗೌರವ ಪ್ರಶಸ್ತಿ ಪ್ರಧಾನ ಮಾಡಿ ಆಶೀರ್ವಚನ ನೀಡಿದರು. ಪ್ರಶಸ್ತಿ ಪ್ರಧಾನ ಮಾಡಿದ ಮುಂಬಯಿ ದಿನೇಶ್ ಶಹರಾ ಪೌಂಡೇಶನ್ ಮುಖ್ಯಸ್ಥ ದಿನೇಶ್ ಶಹರಾ ಮಾತನಾಡಿ ಗೋವುಗಳು ಕುರಿತು ತಳುವಳಿಕೆ
Read Moreಪುರುಷೋತ್ತಮ’ ಪ್ರಶಸ್ತಿ ಪ್ರಧಾನ
ಸಿದ್ದಾಪುರ: ಜಗತ್ತಿನಲ್ಲಿ ಬಹಳಷ್ಟು ತತ್ವಜ್ಞಾನಿಗಳು ಆಗಿಹೋಗಿದ್ದಾರೆ. ಆದರೆ ಶಂಕರರ ಜನ್ಮದಿನವನ್ನು ತತ್ವಜ್ಞಾನಿಗಳ ದಿನ ಎಂದು ಕರೆಯುವುದು ವಿಶೇಷವಾಗಿದೆ ಎಂದು ಶ್ರೀ ರಾಜಾರಾಮ ಕ್ಷೇತ್ರದ ಸ್ವಾಮೀಜಿಗಳಾದ ಬ್ರಹ್ಮಾನಂದ ಭಾರತಿ ಸ್ವಾಮಿಗಳು ಹೇಳಿದರು. ಅವರು ಶುಕ್ರವಾರ ತಾಲೂಕಿನ ಭಾನ್ಕುಳಿಯ ಗೋಸ್ವರ್ಗದಲ್ಲಿ ನಡೆದ ಶಂಕರ ಪಂಚಮಿಯ ಧರ್ಮಸಭೆ ಮತ್ತು ಪುರುಷೋತ್ತಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ, ಮತ ಭೇದವಿಲ್ಲದೆ ಸಾರ್ವಕಾಲಿಕವಾದ, ಸಾರ್ವದೇಶಿಕವಾದ ಉಪದೇಶ ನೀಡಿದಂತಹ ಶಂಕರರನ್ನು ಜಗದ್ಗುರು ಎಂದು ಕರೆಯಲಾಗಿದೆ. ಕರ್ಮ ಮತ್ತು ಚಿತ್ತ ಶುದ್ಧಿಯ ಮೂಲಕ ಮೋಕ್ಷಪ್ರಾಪ್ತಿ
Read More