|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಶ್ರೀಭಾರತೀ ಪದವಿ ಕಾಲೇಜಿಗೆ ನೂತನ ಪ್ರಾಂಶುಪಾಲರು

ಮಂಗಳೂರಿನ ನಂತೂರಿನಲ್ಲಿರುವ ಶ್ರೀಮಠದ ವಿದ್ಯಾಸಂಸ್ಥೆ ಶ್ರೀ ಭಾರತೀ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಶ್ರೀ ಜೀವನದಾಸ್ ಎ. ಅವರು ಮತ್ತು ಉಪಪ್ರಾಂಶುಪಾಲರಾಗಿ ಗಂಗಾರತ್ನ ಮುಗುಳಿ ಅವರು ಗುರುವಾರ ಜವಾಬ್ದಾರಿಯನ್ನು ಸ್ವೀಕರಿಸಿದರು.

 

ಶ್ರೀಭಾರತೀ ಸಮೂಹ ಸಂಸ್ಥೆಗಳ ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ, ಕಾರ್ಯದರ್ಶಿ ಶ್ರೀಕೃಷ್ಣ ನೀರಮೂಲೆ, ಆಡಳಿತಾಧಿಕಾರಿ ಪ್ರೊ.ಕೆ.ಶಂಕರ ಭಟ್ಟ, ಸಹಕಾರ್ಯದರ್ಶಿಗಳಾದ ಪ್ರೊ.ವಿ.ಜಿ.ಭಟ್ಟ, ಉಂಡೆಮನೆ‌ ವಿಶ್ವೇಶ್ವರ ಭಟ್ಟ , ಕಾರ್ಯಾಲಯ ಕಾರ್ಯದರ್ಶಿ ಎಂ.ಟಿ.ಭಟ್ಟ , ಪ.ಪೂ. ಕಾಲೇಜು ಪ್ರಾಂಶುಪಾಲರಾದ ವಿದ್ಯಾ ಭಟ್ಟ, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು